Advertisement
ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿದರು.
Related Articles
Advertisement
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಮಾತನಾಡಿ, ನ.14 ರಿಂದ 20ರವರೆಗೆ ಪ್ರತಿ ವರ್ಷ ಏಳು ದಿನಗಳ ಕಾಲ ಸಹಕಾರ ಸಪ್ತಾಹ ಆಚರಣೆ ಮಾಡಲಾಗುತ್ತದೆ. 20 ವರ್ಷಕ್ಕೂ ಹೆಚ್ಚು ಕಾಲದಿಂದ ಸಹಕಾರ ಸಪ್ತಾಹ ಮಾಡಿಕೊಂಡು ಬಂದಿದ್ದೇನೆ. ಸಹಕಾರ ಮಹಾಮಂಡಳ ಮಾತೃ ಸಂಸ್ಥೆಯಾಗಿ ಕೆಲಸ ಮಾಡುತ್ತಿದೆ. ಸಹಕಾರಿ ಕ್ಷೇತ್ರವನ್ನು ಮುನ್ನಡೆಸುವಲ್ಲಿ ಜಿ.ಟಿ.ದೇವೇಗೌಡ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಹಕಾರದಿಂದ ಸಹಕಾರ ಸಚಿವರಾಗಿ ಕೆಲಸ ಮಾಡುತ್ತಿದ್ದೇನೆ. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಅತಿಹೆಚ್ಚು ಸಾಲ ನೀಡಿದ್ದು ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ. ಸಾಲಮನ್ನಾಕ್ಕಾಗಿ ಬಜೆಟ್ ನಲ್ಲಿ ಹಣ ಒದಗಿಸಿ ಐತಿಹಾಸಿಕ ತೀರ್ಮಾನ ಮಾಡಿದ್ದು ಯಡಿಯೂರಪ್ಪ ಅವರು. ಕಾಂಗ್ರೆಸ್ ಸರ್ಕಾರ ಯಶಸ್ವಿನಿ ಯೋಜನೆಯನ್ನು ರದ್ದು ಮಾಡಿತು. ಆದರೆ ಬಿಜೆಪಿ ಸರ್ಕಾರ ಅದನ್ನು ಮರುಜಾರಿ ಮಾಡಿದೆ. ಈ ಮೂಲಕ ಲಕ್ಷಾಂತರ ರೈತರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.
ಹಾಲು ಪೂರೈಸುವ ರೈತರಿಗೆ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಮುಖಾಂತರ ಸಾಲಸೌಲಭ್ಯ ಕಲ್ಪಿಸಲಾಗುವುದು. ಕ್ಷೇತ್ರದ ಜನತೆಯ ಪ್ರೀತಿ, ವಿಶ್ವಾಸದಿಂದ ಶಾಸಕರಾಗಿ ಆಯ್ಕೆಯಾಗಿ, ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೈಸೂರು ಉಸ್ತುವಾರಿ ಸಚಿವರಾಗಿ ಯಶಸ್ವಿಯಾಗಿ ದಸರಾ ಆಚರಣೆ ಮಾಡಲಾಯಿತು. ಸರ್ಕಾರ, ಪಕ್ಷಕ್ಕೆ ಮುಜಗರವಾಗದಂತೆ ಕೆಲಸ ಮಾಡಿದ್ದೇನೆ. ಯಶವಂತಪುರ ಜನತೆಯ ಪ್ರೀತಿ ವಿಶ್ವಾಸ ಉಳಿಸಿಕೊಂಡಿದ್ದೇನೆ. ದ್ವೇಷದ ರಾಜಕಾರಣ ಮಾಡಿಲ್ಲ, ಮಾಡುವುದಿಲ್ಲ ಎಂದರು.