Advertisement

ನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ತಾತ್ಕಾಲಿಕಮುಂದೂಡಿಕೆ

03:30 PM Nov 11, 2021 | keerthan |

ಬೆಂಗಳೂರು: ನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹವನ್ನು ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

Advertisement

ಸಹಕಾರಿ ಸಪ್ತಾಹವನ್ನು ಯಶಸ್ವಿವಾಗಿ ಆಚರಿಸಲು ಪ್ರತಿ ವರ್ಷ ನವೆಂಬರ್ 14ರಂದು ಹಮ್ಮಿಕೊಳ್ಳಲಾಗುತ್ತಿತ್ತು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 7 ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಮುಖ್ಯಮಂತ್ರಿಗಳು ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು. ಈ ವರ್ಷ ಕೂಡ ನವೆಂಬರ್ 14ರ ಭಾನುವಾರ ಬೆಂಗಳೂರಿನಲ್ಲಿ, ನಂತರ ನಾನಾ ಜಿಲ್ಲೆಗಳಲ್ಲಿ ಸಹಕಾರ ಸಪ್ತಾಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು.

ಆದರೆ 20 ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸ್ಥಾನಗಳಿಗೆ ಡಿ.10ರಂದು ವಿಧಾನ ಪರಿಷತ್ ಚುನಾವಣೆ ನಡೆಯುವುದರಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ನವೆಂಬರ್‌ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next