ಮಹಿಳಾ ಕ್ರಿಕೆಟ್ ಆಧರಿತ “ಸಹರಾ’ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಚಿತ್ರದ ಮುಖ್ಯಭೂಮಿಕೆಯಲ್ಲಿ ಸಾರಿಕಾ ರಾವ್ ನಟಿಸಿದ್ದಾರೆ. ಇದು ಸ್ಫೂರ್ತಿದಾಯಕ ಕಥೆ. ನಾನು ಜವಾಬ್ದಾರಿಯಿಂದ ನನ್ನ ಪಾತ್ರ ನಿರ್ವಹಿಸಿದ್ದೇನೆ ಎಂದುಕೊಳ್ಳುತ್ತೇನೆ. ಮಹಿಳಾ ಪ್ರಧಾನ ಸಿನಿಮಾವನ್ನು ನಿರ್ದೇಶಕರಾದ ಮಜೇಶ್ ಅವರು ಕನ್ನಡ ಚಿತ್ರರಂಗಕ್ಕೆ ಕೊಡುತ್ತಿದ್ದಾರೆ’ ಎಂದರು.
ಕನ್ನಡದಲ್ಲಿ ಮೊದಲ ಮಹಿಳಾ ಕ್ರಿಕೆಟ್ ಪ್ರಧಾನ ಸಿನಿಮಾವಾಗಿರುವ ಸಹಾರಾದಲ್ಲಿ ಮಂಡ್ಯ ಹುಡುಗಿ ಕ್ರಿಕೆಟರ್ ಆದ ಕಥೆಯನ್ನು ಕಟ್ಟಿಕೊಡಲಾಗಿದೆ. ಮಂಡ್ಯ ಹುಡುಗಿಯ ಪಾತ್ರದಲ್ಲಿ ಸಾರಿಕಾ ರಾವ್ ಅಭಿನಯಿಸಿದ್ದಾರೆ. ಪಾತ್ರಕ್ಕಾಗಿಯೇ ಸಾರಿಕಾ ಅವರು ರಣಜಿ ಆಟಗಾರರಾದ. ಕೆ.ಬಿ. ಪವನ್ ಬಳಿ ಕ್ರಿಕೆಟ್ ಆಟದ ಬಗ್ಗೆ ತರಬೇತಿ ಪಡೆದುಕೊಂಡು ಬಂದು ನಂತರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
ಕಳೆದ 8 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಮಂಜೇಶ್ ಭಗವತ್ ಅವರು ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತು ಈ ಚಿತ್ರವನ್ನು ಹೊರತರುತ್ತಿದ್ದಾರೆ. ಮಾ ಕ್ರಿಯೆಷನ್ಸ್ ನಿರ್ಮಾಣದಲ್ಲಿ ಚಿತ್ರ ತಯಾರಾಗಿದೆ. ಉಳಿದಂತೆ ತಾರಾಬಳಗದಲ್ಲಿ ಮಂಜುನಾಥ ಹೆಗಡೆ, ಕುರಿ ಸುನಿಲ್, ಅಂಕುಶ್ ರಜತ್, ರಂಜನ್, ಮಂಜುಳಾ ರೆಡ್ಡಿ, ಪ್ರಕಾಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ.
ಕ್ರಿಕೆಟ್ ಆಧರಿಸಿದ ಈ ಚಿತ್ರಕ್ಕೆ ಕಿಚ್ಚ ಸುದೀಪ್ ನಿರೂಪಣೆ ಮಾಡಿದ್ದಾರೆ. ಮಂಡ್ಯದ ಹುಡುಗಿಯ ಕ್ರಿಕೆಟ್ ಕನಸಿನ ಕಥೆಯನ್ನ ನಿರೂಪಿಸಿದ್ದಾರೆ.