ಜೇವರ್ಗಿ: ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ತಾಲೂಕಿನ ದೀನ ದಲಿತರ, ಬಡವರ ಹಾಗೂ ಹಿಂದುಳಿದ ವರ್ಗದವರಿಗೆ ಉಚಿತ ಆಹಾರ ಧಾನ್ಯ, ಆರ್ಥಿಕ ಧನ ಸಹಾಯ ನೀಡುವ ಮೂಲಕ ನೆರವಿನ ಹಸ್ತ ಚಾಚಿದ ಸಮಾಜ ಸೇವಕ ಜಿಪಂ ಮಾಜಿ ಸದಸ್ಯ ಅಶೋಕ ಸಾಹು ಗೋಗಿ ಅವರ ಅಭಿನಂದನಾ ಸಮಾರಂಭ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಬರುವ ಸೆ.14ರಂದು ನಡೆಯಲಿದೆ ಎಂದು ಕಸಾಪ ಅಧ್ಯಕ್ಷ ಎಸ್.ಕೆ.ಬಿರೆದಾರ ತಿಳಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ರವಿವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಪûಾತೀತವಾಗಿ ನಡೆಯಲಿದ್ದು, ಹರಗುರು ಚರಮೂರ್ತಿಗಳು ಸೇರಿದಂತೆ ರಾಜ್ಯದ ಸಚಿವರು, ಶಾಸಕರು ಸೇರಿದಂತೆ ನಾಡಿನ ವಿವಿದ ಮಠಾಧೀಶರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ದಿ.14 ರಂದು ವಿಜಯಪುರ ರಸ್ತೆಯಲ್ಲಿರುವ ಗೋಗಿ ಲೇಔಟನಲ್ಲಿ ಬೆಳಿಗ್ಗೆ 10 ಗಂಟೆಗೆ ಅಭಿನಂದನಾ ಸಮಾರಂಭ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ನಾಲವಾರ ಶ್ರೀಕೋರಿಸಿದ್ದೇಶ್ವರ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿ ಡಾ| ಸಿದ್ದತೋಟೇಂದ್ರ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಜೈ ಭಾರತಮಾತಾ ಸೇವಾ ಸಂಘದ ಸಂಸ್ಥಾಪಕ ಅಧ್ಯಕ್ಷ ಶ್ರೀ ಹವಾ ಮಲ್ಲಿನಾಥ ಮಹಾರಾಜ, ಶಖಾಪುರದ ಡಾ| ಸಿದ್ದರಾಮ ಶಿವಾಚಾರ್ಯರು, ಸೊನ್ನದ ಡಾ| ಶಿವಾನಂದ ಸ್ವಾಮೀಜಿ, ತಾಂಬಾಳದ ಶ್ರೀವಿಜಯಕುಮಾರ ಸ್ವಾಮೀಜಿ, ಕಡಕೋಳದ ಡಾ| ರುದ್ರಮುನಿ ಶಿವಾಚಾರ್ಯರು, ಕೋಲಾರದ ಶ್ರೀಯೋಗಿ ಕಲ್ಲಿನಾಥ ದೇವರು, ಗಂವ್ಹಾರದ ಶ್ರೀಸೋಪಾನನಾಥ ಸ್ವಾಮೀಜಿ, ಯಡ್ರಾಮಿಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ 33 ಜನ ಸ್ವಾಮೀಜಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಮಾಜಿ ಲೋಕಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಲಕ್ಷ್ಮಣ ಸವದಿ, ಸಚಿವರಾದ ಶ್ರೀರಾಮುಲು, ಮುರುಗೇಶ ನಿರಾಣಿ, ಪ್ರಮುಖರಾದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ನಾ ಗುತ್ತೆದಾರ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಲೋಕಸಭಾ ಸದಸ್ಯ ಡಾ| ಉಮೇಶ ಜಾಧವ, ಶಾಸಕರಾದ ಬಿ.ಜಿ. ಪಾಟೀಲ, ದತ್ತಾತ್ರೇಯ ಪಾಟೀಲ ರೇವೂರ, ಶರಣಬಸಪ್ಪಗೌಡ ದರ್ಶನಾಪುರ, ಸುನೀಲ ವಲ್ಲಾಪುರೆ, ಶಶೀಲ ನಮೋಶಿ, ಡಾ| ಅಜಯಸಿಂಗ್, ಚಿತ್ರನಟ ಮುಖ್ಯಮಂತ್ರಿ ಚಂದ್ರು, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಅಲ್ಲಮಪ್ರಭು ಪಾಟೀಲ ಸೇರಿದಂತೆ ಅನೇಕ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಅಶೋಕ ಸಾಹು ಅಭಿಮಾನಿ ಬಳಗದ ಮಲ್ಲಶೆಟ್ಟೆಪ್ಪಗೌಡ ಹಿರೇಗೌಡ, ವಿಜಯಕುಮಾರ ಪಾಟೀಲ ಸೇಡಂ, ಪ್ರಕಾಶಚಂದ್ರ ಪಾಟೀಲ ಕೂಡಿ, ಪರಮೇಶ್ವರ ಬಿರಾಳ, ಮಲ್ಲು ಸಾಹು ಹುಗ್ಗಿ ಇದ್ದರು.