ಮಧ್ಯಪ್ರದೇಶ: ಮಧ್ಯಪ್ರದೇಶದ ಕಟ್ನಿಯಲ್ಲಿರುವ ದೇವಸ್ಥಾನವೊಂದರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗಲೇ ಹೃದಯಾಘಾತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಮೃತ ದುರ್ದೈವಿಯನ್ನು ರಾಜೇಶ್ ಮೆಹಾನಿ ಎನ್ನಲಾಗಿದ್ದು, ದೇವಸ್ಥಾನದ ಸಿಸಿ ಕ್ಯಾಮೆರಾದಲ್ಲಿ ಘಟನೆಯ ದೃಶ್ಯ ಸೆರೆಯಾಗಿದೆ.
ರಾಜೇಶ್ ಮೆಹಾನಿ ಸಾಯಿ ಭಕ್ತರಾಗಿದ್ದು ಗುರುವಾರ ಮಧ್ಯಪ್ರದೇಶದ ಕಟ್ನಿಯಲ್ಲಿರುವ ಸಾಯಿ ಬಾಬಾ ಮಂದಿರಕ್ಕೆ ಭೇಟಿ ನೀಡಿ ದೇವರ ಎದುರು ಕುಳಿತು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಆದರೆ ಅಲ್ಲಿದ್ದ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ಎಂದುಕೊಂಡಿದ್ದರು ಆದರೆ ಸುಮಾರು ಹದಿನೈದು ನಿಮಿಷಗಳ ಕಾಲ ವ್ಯಕ್ತಿ ಕೂತಿದ್ದ ಸ್ಥಳದಿಂದ ಏಳದಿದ್ದಾಗ ಇತರ ಭಕ್ತರು ಅವರನ್ನು ಮಾತನಾಡಿಸಿದಾಗ ವ್ಯಕ್ತಿಯಿಂದ ಯಾವುದೇ ಪ್ರತಿಕ್ರಿಯೆ ಬರದೇ ಇದ್ದಾಗ ದೇವಸ್ಥಾನ ಆಡಳಿತ ಮಂಡಳಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಅಧಿಕಾರಿಗಳು ಬಂದು ವ್ಯಕ್ತಿಯನ್ನು ಪರಿಶೀಲಿಸಿದಾಗ ಅಸ್ವಸ್ಥರಾಗಿರುವುದು ಕಂಡು ಕೂಡಲೇ ರಾಜೇಶ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಆಸ್ಪತ್ರೆಯಲ್ಲಿ ಪರಿಶೀಲಿಸಿದ ವೈದ್ಯರು ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಿದ್ದಾರೆ,
ಅಧಿಕಾರಿಗಳ ಪ್ರಕಾರ, ಮೆಹಾನಿ ಮೆಡಿಕಲ್ ಸ್ಟೋರ್ ವೊಂದನ್ನು ನಡೆಸುತಿದ್ದರು ಎನ್ನಲಾಗಿದ್ದು ಗುರುವಾರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಬಸ್ ಚಾಲಕ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದರು.
ಇದನ್ನೂ ಓದಿ: ಅಂಜನಾದ್ರಿ ಬೆಟ್ಟಕ್ಕೆ ಯಾತ್ರೆ ಬೆಳೆಸಿದ ಹನುಮ ಮಾಲಾಧಾರಿಗಳು