Advertisement

ಪಡಿತರಕ್ಕೆ ಮುಗಿಬಿದ್ದ ಫಲಾನುಭವಿಗಳು-ಆತಂಕ

04:00 PM Apr 07, 2020 | Naveen |

ಸೈದಾಪುರ: ಕೊರೊನಾ ಸೋಂಕು ನಿಯಂತ್ರಿಣಕ್ಕೆ ಸರ್ಕಾರ ಲಾಕ್‌ಡೌನ್‌ ಜಾರಿಗೊಳಿಸಿದೆ. ಅದರಂತೆಯೇ ಸಾಮಾಜಿಕ
ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದರೂ ಕೂಡ ಸಾಮಾಜಿಕ ಅಂತರ ಕಾಯುಕೊಳ್ಳದೇ ಪಡಿತರಕ್ಕೆ ಜನ ಮುಗಿ ಬಿದ್ದಿರುವುದು ಆತಂಕ ಸೃಷ್ಟಿಸಿದೆ. ಪಟ್ಟಣದ ನ್ಯಾಯಬೆಲೆ ಅಂಗಡಿಯಲ್ಲಿ ಫಲಾನುಭವಿಗಳು ಮುಗಿಬಿದ್ದು, ಆಹಾರ ಧಾನ್ಯ ಪಡೆಯುತ್ತಿದ್ದಾರೆ. ಹೀಗಾಗಿ ಇಲ್ಲಿನ ನ್ಯಾಯಬೆಲೆ ಅಂಗಡಿಗಳಲ್ಲಿ ಲಾಕ್‌ಡೌನ್‌ ಆದೇಶ, ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Advertisement

ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಿಪಿಎಲ್‌ ಪಡಿತರ ಪ್ರತಿ ಸದಸ್ಯರಿಗೆ ಎರಡು ತಿಂಗಳಿಗೆ 10 ಕೆ.ಜಿ ಅಕ್ಕಿ, ಕಾರ್ಡ್‌ಗೆ 4
ಕೆ.ಜಿ ಗೋ ದಿ, ಅಂತ್ಯೋದಯ ಪಡಿತರರಿಗೆ 70 ಕೆ.ಜಿ ಅಕ್ಕಿ ಉಚಿತವಾಗಿ ನೀಡಲು ಆದೇಶಿಸಿದೆ. ಆದರೆ ತಾಲೂಕಾಡಳಿತ ಫಲಾನುಭವಿಗಳಿಗೆ ಆಹಾರ ಧಾನ್ಯಗಳನ್ನು ಸಾಮಾಜಿಕ ಅಂತರ ಕಾಯ್ದುಗೊಂಡು ಪೂರೈಸುವಂತೆ ತಿಳಿಸಿದ್ದರೂ ಆದೇಶ ಪಾಲನೆಯಾಗುತ್ತಿಲ್ಲ. ಹೀಗಾಗಿ ಫಲಾನುಭವಿಗಳು ಮುಗಿಬಿದ್ದು ಆಹಾರ ಧಾನ್ಯಗಳನ್ನು ಪಡೆಯುತ್ತಿರುವುದು ಕಂಡುಬಂತು. ಈ ವೇಳೆ ಪೊಲೀಸರು ಸ್ಥಳಕ್ಕಾಗಮಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದರೂ ಜನ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಇದರಿಂದ ಪೊಲೀಸರು ಪಡಿತರ ವಿತರಣೆ ತಾತ್ಕಾಲಿಕವಾಗಿ ಬಂದ್‌ ಮಾಡಿ ದಿನಕ್ಕೆ ಇಂತಿಷ್ಟು ಜನ ಆಗಮಿಸಬೇಕೆಂದು ಆದೇಶಿಸಿದ ನಂತರ
ಜನರು ಸ್ಥಳದಿಂದ ತೆರಳಿದರು.

Advertisement

Udayavani is now on Telegram. Click here to join our channel and stay updated with the latest news.

Next