Advertisement

ಗರ್ಭಿಣಿಯರು-ಬಾಣಂತಿಯರಿಗೆ ಪೌಷ್ಟಿಕ ಆಹಾರ ಕಿಟ್‌ ವಿತರಣೆ

12:04 PM Jul 09, 2020 | Naveen |

ಸೈದಾಪುರ: ಭವಿಷ್ಯದ ದೃಷ್ಟಿಯಿಂದ ಮಕ್ಕಳ ಜೊತೆಗೆ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯವು ಕೂಡ ಅತಿ ಮುಖ್ಯವಾಗಿದೆ. ಆದ್ದರಿಂದ ಆರು ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಆಹಾರ ವಿತರಿಸಲಾಗುತ್ತಿದೆ ಎಂದು ಅಂಗನವಾಡಿ ಕಾರ್ಯಕರ್ತೆ ಸಾವಿತ್ರಮ್ಮ ಹೇಳಿದರು.

Advertisement

ಕಣೇಕಲ್‌ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೀಡಲಾದ ಪೌಷ್ಟಿಕ ಆಹಾರ ಸಾಮಾಗ್ರಿ ವಿತರಿಸಿ ಅವರು ಮಾತನಾಡಿದರು. ಕೋವಿಡ್  ಸೋಂಕು ಹೆಚ್ಚುತ್ತಿದ್ದು, ಮಕ್ಕಳು, ಗರ್ಭಿಣಿಯರು, ಬಾಣಂತಿ ಯರು, ವೃದ್ಧರು ಮನೆಯಿಂದ ಹೊರಬರಬಾರದು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಮಾರ್ಗರ್ಶನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು. ಅಂಗನವಾಡಿ ಸಹಾಯಕಿ ವಿಜಯಲಕ್ಷ್ಮೀ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next