Advertisement

ಕಳ್ಳತನ ನಿಯಂತ್ರಣಕ್ಕೆ ಪೊಲೀಸರಿಂದ ಜನಜಾಗೃತಿ

06:37 PM Mar 19, 2020 | Naveen |

ಸೈದಾಪುರ: ಪಟ್ಟಣದಲ್ಲಿ ಕಳ್ಳತನ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆಯಿಂದ ಜನಜಾಗೃತಿ ಮೂಡಿಸಲಾಯಿತು. ಇತ್ತೀಚೆಗೆ ಹಲವು ಕಳ್ಳತನ ಪ್ರಕರಣ ನಡೆದ ಹಿನ್ನೆಲೆಯಲ್ಲಿ ಇಲ್ಲಿಯ ಪೊಲೀಸ್‌ ಠಾಣೆ ವತಿಯಿಂದ ಪಟ್ಟಣದಲ್ಲಿ ಬುಧವಾರ ಆಟೋ ಮೂಲಕ ಜಾಗೃತಿ ಮೂಡಿಸಲಾಯಿತು.

Advertisement

ಪೊಲೀಸ್‌ ಹಾಗೂ ಸಾರ್ವಜನಿಕರ ಮಧ್ಯೆ ಉತ್ತಮ ಬಾಂಧವ್ಯ ವೃದ್ಧಿಸಿದರೆ ಅಪರಾಧ ಕೃತ್ಯ ತಡೆಗಟ್ಟಲು ಸಾಧ್ಯವಾಗುತ್ತದೆ. ಆದ್ದರಿಂದ ನಿಮ್ಮ ಮನೆ ಸುತ್ತಮುತ್ತ ಅಪರಿಚಿತ ವ್ಯಕ್ತಿಗಳು ಕಂಡು ಬಂದಲ್ಲಿ ತಕ್ಷಣವೇ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು. ಮನೆಯಲ್ಲಿ ಜನರು ಹೆಚ್ಚು ಬೆಲೆ ಬಾಳುವ ವಸ್ತುಗಳು, ಹಣ ಇಟ್ಟುಕೊಳ್ಳುವುದು ಉತ್ತಮವಲ್ಲ. ದೀರ್ಘ‌ ಕಾಲ ಮನೆಯಿಂದ ಹೊರ ಹೋಗುವ ಸಂದರ್ಭದಲ್ಲಿ ಅಕ್ಕಪಕ್ಕದವರಿಗೆ ಅಥವಾ ಪೊಲೀಸರಿಗೆ ತಿಳಿಸಬೇಕು ಹಾಗೂ ನಿಮ್ಮ ಮನೆಗಳಿಗೆ ಹೆಚ್ಚಿನ ಭದ್ರತೆ ಇರುವ ಕೀಲಿಗಳು, ಅತ್ಯತ್ತಮ ಗುಣಮಟ್ಟದ ಒಳ ಲಾಕರ್‌ಗಳು, ಸಿಸಿ ಕ್ಯಾಮೆರಾ, ಸೈರನ್‌ ವ್ಯವಸ್ಥೆ ಮಾಡಿಕೊಳ್ಳಬೇಕು. ಪಟ್ಟಣದ ಹೊರ ವಲಯದಲ್ಲಿ ಇರುವ ಮನೆಗಳಿಗೆ ಕಬ್ಬಿಣದ ಸರಳುಗಳು ಇರುವ ಬಾಗಿಲುಗಳನ್ನು ಅಳವಡಿಸಿಕೊಳ್ಳಬೇಕು. ದಾಖಲೆ ಇಲ್ಲದ ಬೆಲೆ ಬಾಳುವ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು, ರಾತ್ರಿ ವೇಳೆ ಅಪರಿಚಿತರು ಬಂದರೆ ಬಾಗಿಲು ತೆರೆಯಬಾರದು. ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಅಪರಾಧ ಕೃತ್ಯಗಳು ಕಂಡು ಬಂದರೆ ಕೂಡಲೇ ಪೊಲೀಸ್‌ ಠಾಣೆ ದೂರವಾಣಿ ಸಂಖ್ಯೆ
0847224233, 9480803582 ಕರೆ ಮಾಡಿ ಮಾಹಿತಿ ನೀಡಬೇಕು. ಒಟ್ಟಾರೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಲಾಯಿತು.

ಜನರ ಭದ್ರತೆ ಮತ್ತು ಹಿತಾಸಕ್ತಿಗಾಗಿ ಪೊಲೀಸ್‌ ಇಲಾಖೆ ಸಂಪೂರ್ಣ ಬದ್ಧವಾಗಿದೆ. ಅದಕ್ಕೆ ಸಾರ್ವಜನಿಕರ ಸಹಕಾರ ಮತ್ತು ಜಾಗೃತಿ ಅತಿ ಮುಖ್ಯವಾಗಿದೆ.
ಸುವರ್ಣ ಮಾಲಶಟ್ಟಿ,
ಸೈದಾಪುರ ಠಾಣೆ ಪಿಎಸ್‌ಐ

Advertisement

Udayavani is now on Telegram. Click here to join our channel and stay updated with the latest news.

Next