Advertisement
ಕೊರೊನಾ ವೈರಸ್‌ನಿಂದಾಗಿ ಇಂಗ್ಲೆಂಡಿನಲ್ಲಿ ಈಗಾಗಲೇ ಐವರು ಮೃತಪಟ್ಟಿದ್ದು 300ಕ್ಕೂ ಹೆಚ್ಚಿನ ಮಂದಿಗೆ ಸೋಕು ತಗುಲಿದೆ. ಕೊರೊನಾ ಭೀತಿಯ ಮಧ್ಯೆ ಈ ಋತುವಿನ ಮೊದಲ ಸೂಪರ್ 1000 ಬ್ಯಾಡ್ಮಿಂಟನ್ ಕೂಟ ಸಂಘಟಿಸಲು ಸಿದ್ಧತೆಗಳು ನಡೆಯುತ್ತಿವೆ. ಕೊರೊನಾದಿಂದಾಗಿ ಜರ್ಮನಿ ಓಪನ್ ಸಹಿತ ಹಲವು ಕೂಟಗಳು ಮುಂದೂಡಲ್ಪಟ್ಟಿವೆ. ಇದರಿಂದಾಗಿ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸುವ ನಿಟ್ಟಿನಲ್ಲಿ ಶಟ್ಲರ್‌ಗಳ ಸಿದ್ಧತೆಗೆ ದೊಡ್ಡ ಹೊಡೆತ ಬಿದ್ದಿದೆ.
ಆರೋಗ್ಯದ ದೃಷ್ಟಿಯಿಂದ ಎಚ್.ಎಸ್. ಪ್ರಣಯ್ ಮತ್ತು ವಿಶ್ವದ 10ನೇ ರ್‍ಯಾಂಕಿನ ಡಬಲ್ಸ್ ಜೋಡಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಸಹಿತ ಏಳು ಮಂದಿ ಭಾರತೀಯ ಆಟಗಾರರು ಆಲ್ ಇಂಗ್ಲೆಂಡ್ ಕೂಟದಿಂದ ಹಿಂದೆ ಸರಿದಿದ್ದಾರೆ. ಸಿಂಧು ಅವರು ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸುವುದು ಬಹುತೇಕ ಖಚಿತವಾಗಿದೆ. 2019ರ ವಿಶ್ವ ಬ್ಯಾಡ್ಮಿಂಟನ್ ಕೂಟದಲ್ಲಿ ಚಿನ್ನ ಗೆದ್ದಿರುವ ಸಿಂಧು ಅವರು ಆಲ್ ಇಂಗ್ಲೆಂಡಿನಲ್ಲಿ ಭಾರತದ ಎರಡು ದಶಕಗಳ ಪ್ರಶಸ್ತಿ ಬರವನ್ನು ನೀಗಿಸಲು ಹೋರಾಡಲಿದ್ದಾರೆ. ಇದೇ ವೇಳೆ ಸೈನಾ ನೆಹ್ವಾಲ್ ಮತ್ತು ಕಿದಂಬಿ ಶ್ರೀಕಾಂತ್ ಇಲ್ಲಿ ಗರಿಷ್ಠ ಅಂಕ ಗಳಿಸಿ ಎಪ್ರಿಲ್ 28ರ ಮೊದಲು ಅಗ್ರ 16ರ ಒಳಗಿನ ಸ್ಥಾನಕ್ಕೇರುವ ಗುರಿ ಇಟ್ಟುಕೊಂಡಿದ್ದಾರೆ. ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಲು ಎಪ್ರಿಲ್ 28 ಕೊನೆಯ ದಿನವಾಗಿದೆ. ಆ ದಿನ ವಿಶ್ವ ರ್‍ಯಾಂಕಿಂಗ್‌ನಲ್ಲಿ ಅಗ್ರ 16ನೇ ಸ್ಥಾನದ ಒಳಗಡೆ ಇರುವವರು ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಲಿದ್ದಾರೆ.
Related Articles
Advertisement
ಆದರೆ ಸೈನಾ ಅವರಿಗೆ ಮೊದಲ ಸುತ್ತಿನಲ್ಲಿಯೇ ಕಠಿನ ಎದುರಾಳಿ ಸಿಕ್ಕಿದ್ದಾರೆ. ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸುವ ನಿರೀಕ್ಷೆ ಇಟ್ಟುಕೊಂಡಿರುವ ಸೈನಾ ಮೊದಲ ಸುತ್ತಿನಲ್ಲಿ ಮೂರನೇ ಶ್ರೇಯಾಂಕದ ಜಪಾನಿನ ಅಕಾನೆ ಯಮಗುಚಿ ಅವರ ಸವಾಲನ್ನು ಎದುರಿಸಬೇಕಾಗಿದೆ.