Advertisement

ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ಸಜ್ಜನ್‌ ಕುಮಾರ್‌ ರಾಜೀನಾಮೆ

12:35 PM Dec 18, 2018 | udayavani editorial |

ಹೊಸದಿಲ್ಲಿ : 1984ರ ಸಿಕ್ಖ್ ವಿರೋಧಿ ಗಲಭೆಯಲ್ಲಿ ಅಪರಾಧಿ ಎಂದು ಪರಿಗಣಿಸಲ್ಪಟ್ಟು ದಿಲ್ಲಿ ಹೈಕೋರ್ಟಿನಿಂದ ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟ ಕಾಂಗ್ರೆಸ್‌ ನಾಯಕ ಸಜ್ಜನ್‌ ಕುಮಾರ್‌, ಕಾಂಗ್ರೆಸ್‌ ಪಕ್ಷದ ತನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ತ್ಯಾಗಪತ್ರವನ್ನು ಅವರು ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

Advertisement

ದಿಲ್ಲಿ ಹೈಕೋರ್ಟ್‌ ನನ್ನ ವಿರುದ್ಧ ತೀರ್ಪು ನೀಡಿರುವ ಕಾರಣ ನಾನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಜ್ಜನ್‌ ಕುಮಾರ್‌ ಅವರು ರಾಹುಲ್‌ ಗಾಂಧಿ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next