Advertisement

ಸಕಾಲ ಸೇವೆ: ಅರ್ಜಿ ವಿಲೇವಾರಿಯಲ್ಲಿ ಉಡುಪಿ ಪ್ರಥಮ ಸ್ಥಾನ

09:45 PM Aug 03, 2021 | Team Udayavani |

ಉಡುಪಿ: ಸಕಾಲ ಯೋಜನೆಯಡಿಯ ವಿಳಂಬ ರಹಿತ ಅರ್ಜಿ ವಿಲೇವಾರಿಯಲ್ಲಿ ಉಡುಪಿ ಜಿಲ್ಲೆ ಜುಲೈನಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಪ್ರಥಮ ಸ್ಥಾನ ಕಾಯ್ದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅಧಿಕಾರಿಗಳಿಗೆ ತಿಳಿಸಿದರು.

Advertisement

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕಾಲ ಯೋಜನೆಯ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಕಾಲ ಯೋಜನೆಯು ನಾಗರಿಕರಿಗೆ ಸರಕಾರದ ಸೇವೆಯನ್ನು ನಿಗದಿತ ಕಾಲಾವಧಿಯಲ್ಲಿ ಒದಗಿಸುವ ಪ್ರಮುಖ ಯೋಜನೆಯಲ್ಲಿ ಒಂದಾಗಿದ್ದು, ಸಾರ್ವಜನಿಕರು ಸರಕಾರದ 101 ವಿವಿಧ ಇಲಾಖೆಗಳಲ್ಲಿ 1,112 ಸೇವೆಗಳಿಗೆ ನಿಗದಿತ ಪ್ರಮಾಣದಲ್ಲಿ ಅರ್ಜಿ ಸಲ್ಲಿಸಿ, ಸೇವೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

ಸಾರ್ವಜನಿಕರು ಸಕಾಲದಡಿಯಲ್ಲಿ ನಿಗದಿತ ಅರ್ಜಿಯನ್ನು ಸಲ್ಲಿಸಿದಾಗ ಅಗತ್ಯ ವಿರುವ ಎಲ್ಲ ದಾಖಲೆಗಳನ್ನು ಸಲ್ಲಿಸಿ ದಾಗ ಶೀಘ್ರದಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ. ಅಧಿಕಾರಿಗಳು ನಿಗದಿತ ಕಾಲಾವಧಿಯಲ್ಲಿ ಅವುಗಳನ್ನು  ವಿಲೇವಾರಿ ಮಾಡಬೇಕು. ವಿವಿಧ ಸೇವೆಗಳನ್ನು ಪಡೆಯಲು ನಾಗ ರಿಕರು ಸಲ್ಲಿಸುವ ಅರ್ಜಿಗಳ ತಿರಸ್ಕಾರದ ಪ್ರಮಾಣವನ್ನು ಆದಷ್ಟು ಕಡಿಮೆ ಮಾಡ ಬೇಕು. ಸಕಾರಣವಿಲ್ಲದೆ ಯಾವುದೇ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು ಒಂದೊಮ್ಮೆ ತಿರಸ್ಕಾರ ಮಾಡುವಾಗ ಸರಿಯಾದ ಕಾರಣ ನೀಡಬೇಕು ಎಂದರು.

ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿ ಗಳು, ಸಕಾಲ ಯೋಜನೆಯ ನೋಡಲ್‌ ಅಧಿಕಾರಿಗಳು ಉಪಸ್ಥಿತರಿದ್ದರು.

42,194  ಅರ್ಜಿಗಳು  ವಿಲೇವಾರಿ :

Advertisement

ಪ್ರಸ್ತುತ ಮಾಹೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸರಕಾರದ ಅಡಿಯಲ್ಲಿ 59,237 ಅರ್ಜಿಗಳು ಬಂದಿದ್ದು ಅವುಗಳಲ್ಲಿ 52,511 ಅರ್ಜಿಗಳು ಪುರಸ್ಕೃತಗೊಂಡು 1,094 ಅರ್ಜಿಗಳು ತಿರಸ್ಕೃತಗೊಂಡಿವೆ. ಸಕಾಲ ಯೋಜನೆಯು 2011ರಲ್ಲಿ ರಾಜ್ಯದಲ್ಲಿ ಜಾರಿಗೆ ಬಂದಿದ್ದು ಇದುವರೆಗೆ 6.53 ಕೋಟಿ ಅರ್ಜಿಗಳು ಬಂದಿವೆ. ಅವುಗಳಲ್ಲಿ 5.98 ಕೋಟಿಯಷ್ಟು ಪುರಸ್ಕೃತಗೊಂಡು 45.02 ಲಕ್ಷ ತಿರಸ್ಕೃತಗೊಂಡು 6.43 ಕೋಟಿ ವಿಲೇವಾರಿಯಾಗಿದೆ. ಜಿಲ್ಲೆಯಲ್ಲಿ 14.15 ಲಕ್ಷ ಅರ್ಜಿಗಳು ಬಂದಿದ್ದು, ಅವುಗಳಲ್ಲಿ 13.58 ರಷ್ಟು ಅರ್ಜಿಗಳು ಪುರಸ್ಕೃತಗೊಂಡು 42,194 ಅರ್ಜಿಗಳು ವಿಲೇವಾರಿಗೊಂಡಿವೆ ಎಂದು ಸದಾಶಿವ ಪ್ರಭು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next