Advertisement

ನಿಗದಿತ ಕಾಲಮಿತಿಯಲ್ಲಿ ಸೇವೆ ಒದಗಿಸಿ

04:22 PM Dec 01, 2020 | Suhan S |

ಬಳ್ಳಾರಿ: ಸಾರ್ವಜನಿಕರಲ್ಲಿ ಸಕಾಲ ಯೋಜನೆಯ ಕುರಿತು ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ನವೆಂಬರ 30ರಿಂದ ಡಿಸೆಂಬರ 5ರವರೆಗೆ ಹಮ್ಮಿಕೊಂಡಿರುವ ಸಕಾಲ ಸಪ್ತಾಹ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಎಸ್‌. ಎಸ್‌. ನಕುಲ್‌ ಸೋಮವಾರ ಚಾಲನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್‌ ಸಭಾಂಗಣದಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸ್‌ ಮುಖಾಂತರ ಚಾಲನೆ ನೀಡಿ ಮಾತನಾಡಿದ ಅವರು ಮೊದಲನೇ ಹಂತದಲ್ಲಿ ನಗರಾಭಿವೃದ್ಧಿ, ಕಂದಾಯ, ಸಾರಿಗೆ ಹಾಗೂ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳ ಸಕಾಲ ಸಪ್ತಾಹ ನಡೆಯಲಿದೆ. ಈ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ಸೇವೆಯನ್ನು ಒದಗಿಸುವ ಕೆಲಸವಾಗಬೇಕು. ಅರ್ಜಿ ಸ್ವೀಕೃತಿಯಾದ ನಂತರ ವಿಲೇವಾರಿಯಲ್ಲಿ ಅಧಿಕಾರಿಗಳು ಮಹತ್ವದ ಪಾತ್ರವಹಿಸಬೇಕು. ಸಂಪೂರ್ಣ ಮಾಹಿತಿಯನ್ನೊಳಗೊಂಡ ಮಾಹಿತಿ ಫಲಕಗಳನ್ನು ಹಾಕಲು ಸೂಚಿಸಿದರು.

ಈಗಾಗಲೇ ಸಾರ್ವಜನಿಕರಿಂದ ಸ್ವೀಕೃತವಾಗಿ ಬಾಕಿ ಉಳಿದಿರುವ ಅರ್ಜಿ, ಮೇಲ್ಮನವಿಗಳನ್ನು ವಿಲೇ ಮಾಡುವುದು ಸೇರಿದಂತೆ ಹೊಸದಾಗಿ ಸ್ವೀಕೃತವಾಗುವ ಅರ್ಜಿಗಳನ್ನು ಸಕಾಲದಡಿ ನಿಗದಿಪಡಿಸಲಾದ ಕಾಲಮಿತಿಯೊಳಗೆವಿಲೇವಾರಿ ಮಾಡಬೇಕು. ಸೇವೆಗಳ ಹಕ್ಕು ಪಡೆಯಲು ಬಂದಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಅರ್ಜಿ ಸ್ವೀಕರಿಸಿದ ನಂತರ ಅರ್ಜಿ ಯಾವ ಹಂತದಲ್ಲಿದೆ. ಎಷ್ಟು ದಿನಗಳಲ್ಲಿ ಸೇವೆ ಲಭ್ಯವಾಗುತ್ತಿದೆ ಎಂಬ ಮಾಹಿತಿ ಅರಿವು ಮೂಡಿಸಿ ನಿಗ ದಿತ ಅವಧಿ ಯೊಳಗೆ ವಿಲೇವಾರಿ ಮಾಡುವ ಮೂಲಕ ಸಪ್ತಾಹ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ನೋಡಲ್‌ ಅಧಿಕಾರಿಗಳ ನೇಮಕ: ಜಿಲ್ಲೆಯಾದ್ಯಂತ ನವೆಂಬರ 30ರಿಂದ ಡಿಸೆಂಬರ 5ರವರೆಗೆ ಹಮ್ಮಿಕೊಂಡ ಸಕಾಲ ಸಪ್ತಾಹ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ನೋಡಲ್‌ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾ ಧಿಕಾರಿ ಎಸ್‌.ಎಸ್‌.ನಕುಲ್‌ ಆದೇಶ ಹೊರಡಿಸಿದ್ದಾರೆ. ಕಂದಾಯ ಇಲಾಖೆಗೆ ಬಳ್ಳಾರಿ ಉಪವಿಭಾಗಾಧಿಕಾರಿ ರಮೇಶ ಕೋನರೆಡ್ಡಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಅದೇ ಇಲಾಖೆಯ ಜಂಟಿ ನಿರ್ದೇಶಕ ಶ್ರೀಧರ್‌, ಸಾರಿಗೆ ಇಲಾಖೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಶೇಖರ್‌, ನಗರಾಭಿವೃದ್ಧಿ ಕೋಶಕ್ಕೆ ಡಿಯುಡಿಸಿ ಯೋಜನಾ ನಿರ್ದೇಶಕ ರಮೇಶ ಅವರನ್ನು ನೇಮಿಸಲಾಗಿದೆ. ಪ್ರತಿ ನೋಡಲ್‌ ಅಧಿಕಾರಿಗಳೊಂದಿಗೆ ಮೂರು ಜನ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ತಂಡದ ಸದಸ್ಯರನ್ನಾಗಿ ನೇಮಿಸಲಾಗಿದೆ.

ಸಕಾಲ ಸಪ್ತಾಹದ ಉದ್ದೇಶದ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಬೇಕು. ಸಕಾಲ ಮಿಶನ್‌ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ, ಪ್ರಚುರಪಡಿಸಬೇಕು. ಕಚೇರಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ನಿಗದಿತ ಪ್ರಶ್ನಾವಳಿ ರೂಪದಲ್ಲಿ ಸಾರ್ವಜನಿಕರಿಂದ ಮಾಹಿತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ನಕುಲ್ ಅವರು ನೋಡಲ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next