ಸಕಲೇಶಪುರ: ಪುರಾತನ ಕಾಲದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ನಿರಂತರವಾಗಿ ನೆರವು ನೀಡಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಹಾಸನ ಜಿಲ್ಲಾ ನಿರ್ದೇಶಕಿ ಮಮತಾ ಹರೀಶ್‌ರಾವ್ ಹೇಳಿದರು.
ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾಮದ ಶ್ರೀ ಗುರು ಶನೈಶ್ವರ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ಮಂಜೂರಾದ 1,50,000ರೂ. ಗಳನ್ನು ದೇವಸ್ಥಾನ ಅಭಿವೃದ್ದಿ ಸಮಿತಿಗೆ ಹಸ್ತಾಂತರಿಸಿದ ನಂತರ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಡಾ.ವಿರೇಂದ್ರ ಹೆಗಡೆರವರ ಮಾರ್ಗದರ್ಶನದಲ್ಲಿ ಹಲವಾರು ಸಾಮಾಜಿಕ ಚಟುವಟಿಕೆಗಳನ್ನು ಮಾಡಲಾಗುತ್ತಿದೆ.
ಧರ್ಮಸ್ಥಳ ಸಂಸ್ಥೆ ವತಿಯಿಂದ ಸಾವಿರಾರು ಪುರಾತನ ಕಾಲದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ನೆರವು ನೀಡಲಾಗಿದೆ. ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ವಳಲಹಳ್ಳಿ ಗ್ರಾಮದ ಗುರು ಶನೇಶ್ವರ ದೇವಸ್ಥಾನದ ಗೋಪುರ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಸ್ಥೆ ವತಿಯಿಂದ ಸುಮಾರು 1,50,000 ರೂ. ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲೂಕಿನ ಯೋಜನಾಧಿಕಾರಿಗಳಾದ ಪುರುಷೋತ್ತಮ್. ವಲಯದ ಮೇಲ್ವಿಚಾರಕರಾದ ಚಿರಂತ್ ಹಾಗೂ ಸೇವಾಪ್ರತಿನಿಧಿಗಳಾದ ಶೃತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
21ಎಸ್.ಕೆ.ಪಿ.ಪಿ 2 ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾಮದ ಶ್ರೀ ಗುರು ಶನೈಶ್ವರ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ಮಂಜೂರಾದ 1,50,000ರೂ. ಗಳನ್ನು ದೇವಸ್ಥಾನ ಅಭಿವೃದ್ದಿ ಸಮಿತಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಅಧಿಕಾರಿಗಳು ಹಸ್ತಾಂತರಿಸಿದರು.