Advertisement

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ಟೀಸರ್‌

01:15 PM Oct 22, 2021 | Team Udayavani |

ಗೋಲ್ಡನ್‌ ಸ್ಟಾರ್‌ ಗಣೇಶ್‌ ನಾಯಕನಾಗಿ  ಅಭಿನಯಿಸುತ್ತಿರುವ “ಸಖತ್‌’ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯಗಳು ಅಂತಿಮ ಹಂತದಲ್ಲಿದ್ದು, ಚಿತ್ರ ಇದೇ ನವೆಂಬರ್‌ ತೆರೆಗೆ ಬರೋದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗಾಗಲೇ “ಸಖತ್‌’ ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌ ಮತ್ತು ಮೊದಲ ಹಾಡು ಬಿಡುಗಡೆ ಮಾಡಿ ಭರ್ಜರಿಯಾಗಿ ಚಿತ್ರದ ಪ್ರಮೋಶನ್ಸ್‌ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇದೇ ಅ. 24ಕ್ಕೆ ಚಿತ್ರದ ಟೀಸರ್‌ ಬಿಡುಗಡೆ ಮಾಡಲು ಪ್ಲಾನ್‌ ಮಾಡಿಕೊಂಡಿದೆ.

Advertisement

“ಸಖತ್‌’ ಬಗ್ಗೆ ಮಾತನಾಡುವ ನಿರ್ದೇಶಕ ಸುನಿ, “ಇದೊಂದು ಕಾಮಿಡಿ ಕಂ ಕ್ರೈಂ-ಥ್ರಿಲ್ಲರ್‌ ಶೈಲಿಯ ಸಿನಿಮಾ. ಟಿವಿ ರಿಯಾಲಿಟಿ ಶೋ, ಒಂದು ಮರ್ಡರ್‌ ಹಾಗೂ ಕೋರ್ಟ್‌ ಕೇಸ್‌ ಸುತ್ತ ಇಡೀ ಸಿನಿಮಾ ನಡೆಯುತ್ತದೆ. ಗಣೇಶ್‌ ಹಿಂದಿನ ಎಲ್ಲ ಸಿನಿಮಾಗಳಿಗಿಂತ ಹೊಸಥರದಲ್ಲೇ ಈ ಸಿನಿಮಾದಲ್ಲಿ ಕಾಣುತ್ತಾರೆ. ಅವರ ಪರ್ಫಾರ್ಮೆನ್ಸ್‌ ಬೇರೆ ಲೆವೆಲ್‌ನಲ್ಲಿಯೇ ಇದೆ. ಆಡಿಯನ್ಸ್‌ “ಸಖತ್‌’ ಆಗಿಯೇ ಸಿನಿಮಾ ಎಂಜಾಯ್‌ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಈಗಾಗಲೇ ರಿಲೀಸ್‌ ಆಗಿರುವ ಫ‌ಸ್ಟ್‌ಸಾಂಗ್‌ಗೆ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಸದ್ಯ ಸಿನಿಮಾ ಸೆನ್ಸಾರ್‌ ಮುಂದಿದೆ’ ಎನ್ನುತ್ತಾರೆ.

ಇದನ್ನೂ ಓದಿ:ಟ್ರೇಲರ್‌, ಟೀಸರ್‌, ಸಾಂಗ್ಸ್‌ ಧಮಾಕ: ರಿಲೀಸ್ ಗೆ ತಯಾರಾದ ಚಿತ್ರಗಳ ಶರವೇಗದ ಪ್ರಮೋಷನ್

“ಕೆವಿ ಎನ್‌ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ನಿಶಾ ವೆಂಕಟ್‌ ಕೋಣಂಕಿ ಮತ್ತು ಸುಪ್ರಿತ್‌ “ಸಖತ್‌’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಮೊದಲ ಬಾರಿಗೆ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌, ಅಂಧ ಗಾಯಕನಾಗಿ ರಿಯಾಲಿಟಿ ಶೋ ಸ್ವರ್ಧಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ನಿಶ್ವಿ‌ಕಾ ನಾಯ್ಡು ಹಾಗೂ ಹೊಸ ಪ್ರತಿಭೆ ಸುರಭಿ ನಾಯಕಿಯರಾಗಿ ಅಭಿನಯಿಸಿದ್ದಾರೆ.

“ಚಮಕ್‌’ ಚಿತ್ರದ ನಂತರ ಸಿಂಪಲ್‌ ಸುನಿ ಎರಡನೇ ಬಾರಿಗೆ ಗಣೇಶ್‌ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. “ಸಖತ್‌’ ಚಿತ್ರಕ್ಕೆ ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣ, ಶಾಂತ ಕುಮಾರ್‌ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನವಿದೆ. ಇದೇ ನವೆಂಬರ್‌ ವೇಳೆಗೆ “ಸಖತ್‌’ ಹೇಗಿದೆ ಅನ್ನೋ ಕುತೂಹಲಕ್ಕೆ ತೆರೆ ಬೀಳಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next