ಸಕಲೇಶಪುರ: ತಾಲೂಕಿನ ಕುಡುಗರಹಳ್ಳಿ ಬಳಿಯ ಕ್ಯಾಂಪ್‌ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬುಧವಾರ ನಡೆದಿದೆ.
ಅಸ್ವಸ್ಥಗೊಂಡಿರುವ ಎಲ್ಲಾ ಸೈನಿಕರಿಗೆ ಸಕಲೇಶಪುರ ಸರಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜೀವಕ್ಕೆ ಯಾವುದೇ ಅಪಾಯವಿರುವುದಿಲ್ಲ ಎಂದು ತಿಳಿದು ಬಂದಿದೆ.
ಸೈನಿಕರು ಚಾಲನಾ ತರಬೇತಿಗೆ ಬಂದಿದ್ದರು. ಮಧ್ಯಾಹ್ನ ಕ್ಯಾಂಪ್‌ನಲ್ಲೇ ತಯಾರಾದ ಆಹಾರ ಸೇವಿಸಿದ್ದರು ಎಂದು ತಿಳಿದು ಬಂದಿದೆ.
Related Articles
ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು.