ಹೈದರಾಬಾದ್: ಅಂದುಕೊಂಡಂತೆ ಬಹು ನಿರೀಕ್ಷಿತ ʼಸಲಾರ್ʼ ಸಿನಿಮಾದ ಟೀಸರ್ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಎಲ್ಲಾ ಭಾಷೆಯಲ್ಲಿ ಟೀಸರ್ ಸೌಂಡ್ ಮಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರೇಕ್ಷಕರಿಗೆ ಸ್ಪೆಷೆಲ್ ಥ್ಯಾಂಕ್ಸ್ ಹೇಳಿದೆ.
ಅದ್ದೂರಿ ಸೆಟ್ ನಲ್ಲಿ ಸಿನಿಮಾ ಮೂಡಿಬಂದಿದೆ. ಅದರ ಝಲಕ್ ನ್ನು ಟೀಸರ್ ನಲ್ಲಿ ತೋರಿಸಲಾಗಿದೆ. ಪ್ರಭಾಸ್ ಅವರು ಹಿಂದೆಂದೂ ಕಾಣಿಸಿಕೊಳ್ಳದ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಮಲ್ಟಿ ಸ್ಟಾರ್ಸ್ ಸಿನಿಮಾದ ಮೇಲೆ ಸಿಕ್ಕಾಪಟ್ಟೆ ಹೋಪ್ ಇಟ್ಟುಕೊಳ್ಳಲಾಗಿದೆ.
“ಸಿಂಹ.. ಚಿರತೆ.. ಹುಲಿ.. ಆನೆ.. ತುಂಬಾ ಡೇಂಜರಸ್.. ಎನ್ನುವ ಡೈಲಾಗ್ಸ್ ಗಳು ಯುದ್ದದ ಅಖಾಡದ ದೃಶ್ಯಗಳು ಸಿನಿಮಾದ ಅದ್ಧೂರಿತನವನ್ನು ತೋರಿಸುತ್ತದೆ. ಈಗಾಗಲೇ ಸಿನಿಮಾದ ಟೀಸರ್ 10 ಕೋಟಿ ವೀಕ್ಷಣೆ ಕಂಡಿದೆ. ಈ ಹಿನ್ನೆಲೆಯಲ್ಲಿ ಹೊಂಬಾಳೆ ಫಿಲ್ಮ್ಸ್ ಪ್ರೇಕ್ಷಕರಿಗೆ ಸ್ಪೆಷೆಲ್ ಥ್ಯಾಂಕ್ಸ್ ಹೇಳಿದೆ.
ಭಾರತೀಯ ಸಿನಿಮಾ ಸಾಮರ್ಥ್ಯದ ಸಂಕೇತವಾಗಿ ಹೊರಹೊಮ್ಮಿರುವ ‘ಸಲಾರ್’ ಕ್ರಾಂತಿಗೆ ಮುನ್ನುಡಿಯಾಗಿ ಚಿತ್ರಪ್ರೇಮಿಗಳಿಂದ ದೊರಕಿದ ಪ್ರೀತಿಪೂರ್ವಕ ಬೆಂಬಲದಿಂದ ನಮ್ಮ ಮನತುಂಬಿದೆ. ಭಾರತೀಯ ಚಿತ್ರ ‘ಸಲಾರ್’ ಸಿನಿಮಾ ಟೀಸರ್ 10 ಕೋಟಿ ಚಿತ್ರರಸಿಕರನ್ನು ತಲುಪಿ ಭಾರತೀಯ ಸಿನಿಮಾರಂಗದಲ್ಲಿ ಹೊಸ ದಾಖಲೆ ಬರೆದಿದೆ. ನಿಮ್ಮ ಅಭಿಮಾನದ ಬೆಂಬಲಕ್ಕೆ ನಾವು ಸದಾ ಋಣಿಗಳು. ನಿಮ್ಮ ಅಚಲ ಬೆಂಬಲವು ನಮ್ಮ ಆಸಕ್ತಿಗೆ ಚೈತನ್ಯ ತುಂಬಿ ಅಸಾಧಾರಣವಾದುದನ್ನು ಪ್ರೇಕ್ಷಕರ ಮುಂದಿಡಲು ಪ್ರೇರೇಪಿಸುತ್ತಿದೆ.
ಭಾರತೀಯ ಸಿನಿಮಾದ ಭವ್ಯತೆಯನ್ನು ಸಾರಲಿರುವ ಅತ್ಯಂತ ನಿರೀಕ್ಷಿತ ಚಿತ್ರದ ಟ್ರೈಲರ್ ಅನ್ನು ಬಿಡುಗಡೆಗೊಳಿಸಲು ನಾವು ಸಿದ್ಧರಾಗುತ್ತಿದ್ದೇವೆ. ಆಗಸ್ಟ್ ಕೊನೆಯಲ್ಲಿ ಬಿಡುವು ಮಾಡಿಕೊಳ್ಳಲು ಮರೆಯದಿರಿ. ಅವಿಸ್ಮರಣೀಯ ಅನುಭವ ನೀಡಿ ಪುಪಂಚದಾದ್ಯಂತ ಸದ್ದು ಮಾಡಲಿರುವ ಟ್ರೈಲರ್ ಗಾಗಿ ನಿರೀಕ್ಷಿಸಿ..! ಕ್ಷಣ ಕ್ಷಣದ UPDATES ಗಾಗಿ ಸದಾ ನಮ್ಮೊಂದಿಗೆ ಜೊತೆಯಾಗಿ ಸಂಪರ್ಕದಲ್ಲಿರಿ. ಮರೆಯಲಾಗದ ಅನುಭವ ನಿಮ್ಮದಾಗಿಸಿಕೊಳ್ಳಲು ತಯಾರಾಗಿ. ಈ ಕುತೂಹಲಭರಿತ ರೋಮಾಂಚನಕಾರಿ ಪಯಣವನ್ನು ನಾವು ಮುಂದುವರಿಸೋಣ, ಚರಿತ್ರೆ ನಿರ್ಮಿಸೋಣ ಹಾಗೂ ಭಾರತೀಯ ಸಿನಿಮಾದ ಸಾಮರ್ಥ್ಯವನ್ನು ಸಂಭ್ರಮಿಸೋಣ ಎಂದು ಪೋಸ್ಟ್ ಮೂಲಕ ಹೇಳಿದೆ.
ಸೆ.28 ರಂದು ವಿಶ್ವದೆಲ್ಲೆಡೆ ʼಸಲಾರ್ʼ ಸಿನಿಮಾ ತೆರೆಗೆ ಬರಲಿದ್ದು, ಈ ಸಿನಿಮಾದಲ್ಲಿ ಪ್ರಭಾಸ್ , ಶ್ರುತಿ ಹಾಸನ್, ಶ್ರೀಯಾ ರೆಡ್ಡಿ, ಈಶ್ವರಿ ರಾವ್, ಮಧು ಗುರುಸ್ವಾಮಿ ಮತ್ತು ಜಗಪತಿ ಬಾಬು ಮುಂತಾದವರು ನಟಿಸಿದ್ದಾರೆ.