Advertisement

ಮುಷ್ಕರದಲ್ಲಿ ಭಾಗಿಯಾದರೆ ಸಂಬಳ ಕಟ್ : ಸಾರಿಗೆ ನೌಕರರಿಗೆ ಸಿಎಂ ಎಚ್ಚರಿಕೆ!

05:20 PM Apr 11, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ದಿನದಿಂದ ದಿನಕ್ಕೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಸಾರಿಗೆ ನೌಕರರು ಎಷ್ಟೇ ಪ್ರತಿಭಟನೆ, ಮುಷ್ಕರವನ್ನು ಮಾಡಿದರೂ ಕೂಡ ಸರ್ಕಾರ ಮಾತ್ರ ವೇತನ ಹೆಚ್ಚಳ ಮಾಡುವುವಿಲ್ಲ ಎಂದು ಪಟ್ಟು ಹಿಡಿದಿದೆ. ಈ ಕಾರಣಕ್ಕೆ ನಾಳೆ ತಟ್ಟೆ ಮತ್ತು ಲೋಟ ಬಡಿದುಕೊಂಡು ನೌಕರರು ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಪ್ಲಾನ್ ಮಾಡಿದ್ದಾರೆ.

Advertisement

ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಈ ಬಗ್ಗೆ ಸಭೆ ನಡೆದಿದ್ದು, ಸಾರಿಗೆ ನೌಕರರು ಮತ್ತು ಕುಟುಂಬದವರು ಡಿಸಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲು ಯೋಚನೆ ಮಾಡಿದ್ದಾರೆ.

ಈ ಬೆನ್ನಲ್ಲೇ ರಾಯಚೂರಿನಲ್ಲಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಯಾರು ಮುಷ್ಕರದಲ್ಲಿ ಭಾಗಿಯಾಗುತ್ತಾರೋ ಆ ನೌಕರರ ಸಂಬಳವನ್ನು ಕಟ್ ಮಾಡಲಾಗುತ್ತದೆ. ಕೆಲಸಕ್ಕೆ ಹಾಜರಾಗದೆ ಮುಷ್ಕರದಲ್ಲಿ ಭಾಗಿಯಾದರೆ ಸಂಬಳವನ್ನು ಕೊಡುವುದಿಲ್ಲ ಎಂದು ಯಡಿಯೂರಪ್ಪ ಸಾರಿಗೆ ನೌಕರರಿಗೆ ಎಚ್ಚರಿಕೆ ನೀಡಿದ್ದಾರೆ.

ಇತ್ತ ಕಳೆದ ಐದು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದರೂ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲ. ಈ ಕಾರಣಕ್ಕೆ ನಾಳೆಯಿಂದ ರಸ್ತೆಗಿಳಿದು ಪ್ರತಿಭಟನೆ ಮಾಡುವುದಾಗಿಯೂ ನೌಕರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next