Advertisement

Salary increase: ಅತಿಥಿ ಶಿಕ್ಷಕರಿಂದ 13ರಂದು ಬೆಳಗಾವಿ ಚಲೋ

11:13 PM Dec 08, 2024 | Team Udayavani |

ಬೆಂಗಳೂರು: ಅತಿಥಿ ಶಿಕ್ಷಕರ ವೇತನ ಹೆಚ್ಚಳ ಮತ್ತು ಸೇವೆ ಕಾಯಂ ಸೇರಿ ಮತ್ತಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದಿಂದ ಡಿ.13ಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗ “ಬೆಳಗಾವಿ ಚಲೋ’ವನ್ನು ಹಮ್ಮಿಕೊಳ್ಳಲಾಗಿದೆ.

Advertisement

ಈ ಪ್ರಕ್ರಿಯೆಯಲ್ಲಿ ಮೆರಿಟ್‌ ಪದ್ಧತಿ ಕೈಬಿಟ್ಟು ಮೊದಲು ಕಾರ್ಯನಿರ್ವಹಿಸಿದವರಿಗೆ ಆದ್ಯತೆ ನೀಡಬೇಕು. ಸೇವಾಭದ್ರತೆ ಒದಗಿಸಬೇಕು. ಸರಕಾರಿ ಶಿಕ್ಷಕರಂತೆ ಬೇಸಗೆಯ ರಜೆಯನ್ನು 12 ತಿಂಗಳು ವೇತನ ನೀಡುವುದರ ಜತೆಗೆ ಸೇವೆಯಲ್ಲಿ ಮುಂದುವರಿಸಿ ನೇಮಕಾತಿಯಲ್ಲಿ ಪ್ರತಿ ವರ್ಷ ಶೇ.5 ಕೃಪಾಂಕ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಅತಿಥಿ ಶಿಕ್ಷಕ ಎಂಬ ಪದ ಬದಲು ಗೌರವ ಅಥವಾ ಅರೆಕಾಲಿಕ ಶಿಕ್ಷಕ ಎಂದು ನಮೂದಿಸಬೇಕು. ಅತಿಥಿ ಶಿಕ್ಷಕರಿಗೆ ಜೀವ ವಿಮೆ ಸೌಲಭ್ಯ ಒದಗಿಸಬೇಕು ಎಂಬ ಬೇಡಿಕೆಗಳನ್ನು ಈಡೇರಿಸುವಂತೆ ಸಂಘದ ರಾಜ್ಯಾಧ್ಯಕ್ಷ ಎಚ್‌.ಎಸ್‌. ಹನುಮಂತ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next