ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷದ ಕೊಡುಗೆಯಾಗಿ ಐಎಎಸ್ ಅಧಿಕಾರಿಗಳಿಗೆ ವೇತನ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಾರ್ಯದರ್ಶಿ ಎಂ. ಮಹೇಶ್ವರ ರಾವ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ್‌ಗೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಲಾಗಿದೆ.
ಕೇಂದ್ರ ಸೇವೆಯಲ್ಲಿರುವ ಕಾಫಿ ಮಂಡಳಿ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಅವರಿಗೆ ವೇತನ ಬಡ್ತಿ ನೀಡಿ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ. ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿ ಡಾ.ಆರ್.ವಿಶಾಲ್‌ರಾಜ್, ಡಿಪಿಎಆರ್ ಹೆಚ್ಚುವರಿ ಕಾರ್ಯದರ್ಶಿ ಅಜಯ್ ನಾಗಭೂಷಣ್, ಬಿಬಿಎಂಪಿ ವಿಶೇಷ ಆಯುಕ್ತ ಅನುºಕುಮಾರ್, ಸಮೂಹ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕ ಡಾ.ಎನ್. ವಿ.ಪ್ರಸಾದ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಸಿ.ಶಿಖಾ, ಕೃಷ್ಣ ಭಾಗ್ಯ ಜಲ ನಿಗಮ ವ್ಯವಸ್ಥಾಪಕ ನಿರ್ದೇಶಕ ಎನ್.ಜಯರಾಂ, ಪೌರಾಡಳಿತ ಇಲಾಖೆ ನಿರ್ದೇಶಕ ಬಿ.ಎಸ್.ಶೇಖರಪ್ಪ, ಕೆಪಿಎಸ್‌ಸಿ ಕಾರ್ಯದರ್ಶಿ ಜಿ.ಸತ್ಯವತಿ ಅವರಿಗೂ ವೇತನ ಬಡ್ತಿ ನೀಡಲಾಗಿದೆ.
ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಶನ್ ಆಂಡ್ ಕಮಿಷನರ್ ಆಫ್ ಸ್ಟಾಂಪ್ಸ್ ಡಾ.ಕೆ.ವಿ.ತ್ರಿಲೋಕ ಚಂದ್ರ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಕೆ.ಪಿ. ಮೋಹನರಾಜ್, ರಾಜ್ಯ ಗೋದಾಮು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ, ಮೈಸೂರು ಜಿಲ್ಲಾಧಿಕಾರಿ ಅಭಿರಾಮ ಶಂಕರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಯಾದಗಿರಿ ಜಿಲ್ಲಾಧಿಕಾರಿ ಕುರ್ಮಾ ರಾವ್, ಜೆಸ್ಕಾ ಎಂ.ಡಿ.ಡಾ.ರಂಗಪ್ರಿಯಾ ಆರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಅನಿರುದ್ಧ ಶ್ರವಣ್, ಕೊಪ್ಪಳ ಜಿಲ್ಲಾಧಿಕಾರಿ ಪೊಮ್ಮಲ ಸುನಿಲ್ ಕುಮಾರ್, ಬೆಂಗಳೂರು ಸ್ಮಾರ್ಟ್ ಸಿಟಿ ನಿಗಮದ ಎಂಡಿ ಹೆಬ್ಸಿಬಾ ರಾಣಿ ಕೊರ್ಲಪಟ್ಟಿ, ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರಿಗೆ ವೇತನ ಬಡ್ತಿ ನೀಡಿ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ.
ಕೋಲಾರ ಜಿಪಂ ಸಿಇಒ ದರ್ಶನ್ ಎಚ್.ವಿ. ರಾಮನಗರ ಜಿಪಂ ಸಿಇಒ ಮೊಹಮದ್ ಇಕ್ರಮುಲ್ಲಾ ಶರೀಫ್, ಗದಗ ಜಿಪಂ ಸಿಇಒ ಡಾ.ಆನಂದ ಕೆ.ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಪೂರ್ವಿತಾ ಎಸ್., ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಂಡ್ವೆ ರಾಹುಲ್ ತುಕಾರಾಮ್, ಚಾಮರಾಜನಗರ ಸಿಇಒ ಭೋಯಾರ ಹರ್ಷಾಲ್ ನಾರಾಯಣರಾವ್, ಬೀದರ್ ಜಿಪಂ ಸಿಇಒ ಜ್ಞಾನೇಂದ್ರ ಕುಮಾರ್ ಗಾಂಗ್ವಾರ್, ಉಡುಪಿ ಜಿಪಂ ಸಿಇಒ ಪ್ರೀತಿ ಗೆಹೊಟ್ ಅವರಿಗೆ ವೇತನ ಬಡ್ತಿ ನೀಡಿ ಅದೇ ಹುದ್ದೆಯಲ್ಲಿ ಮುಂದುವರಿಸಿ ಆದೇಶಿಸಲಾಗಿದೆ.