Advertisement

15 ದಿನದಲ್ಲಿ ವೇತನ ಬಿಡುಗಡೆ

11:38 PM Feb 18, 2020 | Team Udayavani |

ವಿಧಾನ ಪರಿಷತ್ತು: ಹಲವು ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಮತ್ತು ಖಾಸಗಿ ಅನುದಾನಿತ ಚಿತ್ರಕಲಾ ಮಹಾವಿದ್ಯಾಲಯ ಸಿಬ್ಬಂದಿ ವೇತನವನ್ನು 15 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಭರವಸೆ ನೀಡಿದರು.

Advertisement

ತಾಂತ್ರಿಕ ಕಾರಣಗಳಿಂದ ಹಲವು ತಿಂಗಳಿಂದ ಉದ್ದೇಶಿತ ಕಾಲೇಜುಗಳ ಸಿಬ್ಬಂದಿ ವೇತನ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಮುಂದಿನ 2 ವಾರಗಳಲ್ಲಿ ಪೂರ್ಣ ಸಂಬಳ ಬಿಡುಗಡೆ ಮಾಡಲಾಗುವುದು. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲವೆಂದರು.

ಸದನದಲ್ಲಿ ನಿಯಮ 330ಎ ಅಡಿ ಬಿಜೆಪಿ ಸದಸ್ಯ ಎಸ್‌. ವಿ.ಸಂಕನೂರು ಈ ವಿಷಯ ಪ್ರಸ್ತಾಪಿಸಿ, ರಾಜ್ಯದ ಪಾಲಿಟೆಕ್ನಿಕ್‌ ಕಾಲೇಜು ಮತ್ತು ಖಾಸಗಿ ಅನುದಾನಿತ ಚಿತ್ರಕಲಾ ಮಹಾವಿದ್ಯಾಲಯಗಳಲ್ಲಿ ಸುಮಾರು 1 ವರ್ಷದಿಂದ ಸರಿಯಾಗಿ ವೇತನ ಬಿಡುಗಡೆ ಆಗುತ್ತಿಲ್ಲ. ಇದರಿಂದ ಅರೆಕಾಲಿಕ ಉಪನ್ಯಾಸಕರ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಮಾನಸಿಕ ಹಿಂಸೆಗೆ ಒಳಗಾಗುತ್ತಿದ್ದಾರೆ. ಅತ್ತ ಪರಿಣಾಮಕಾರಿಯಾಗಿ ಪಾಠ ಮಾಡಲಿಕ್ಕೂ ಆಗುತ್ತಿಲ್ಲ ಎಂದು ಗಮನಸೆಳೆದರು.

ಇದಲ್ಲದೆ, ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಡಿ-ದರ್ಜೆ ನೌಕರರೂ ಇದೇ ಸಂಕಷ್ಟ ಎದುರಿಸುತ್ತಿದ್ದು, ಕುಟುಂಬ ಬೀದಿಗೆ ಬರುವ ಪರಿಸ್ಥಿತಿಯಿದೆ. ಕೂಡಲೇ ವೇತನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next