Advertisement

ನಾಳೆಯಿಂದ ಚುನಾವಣಾ ಬಾಂಡ್‌ಗಳ ಮಾರಾಟ

10:01 PM Nov 07, 2022 | Team Udayavani |

ನವದೆಹಲಿ: ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 23ನೇ ಕಂತಿನ ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಕೇಂದ್ರ ಸರ್ಕಾರ ಸೋಮವಾರ ಅನುಮತಿ ನೀಡಿದೆ.

Advertisement

ನ.9ರಿಂದಲೇ ಬಾಂಡ್‌ ಮಾರಾಟ ಆರಂಭವಾಗಲಿದೆ. ರಾಜಕೀಯ ನಿಧಿ ಸಂಗ್ರಹದಲ್ಲಿ ಪಾರದರ್ಶಕತೆ ತರುವ ಪ್ರಯತ್ನಗಳ ಭಾಗವಾಗಿ ರಾಜಕೀಯ ಪಕ್ಷಗಳಿಗೆ ನೀಡುವ ನಗದು ದೇಣಿಗೆಗೆ ಪರ್ಯಾಯವಾಗಿ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಲಾಗುತ್ತದೆ.

23ನೇ ಕಂತಿನ ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಎಸ್‌ಬಿಐಗೆ ಅಧಿಕಾರ ನೀಡಲಾಗಿದೆ. ನ.9ರಿಂದ ನ.15ರವರೆಗೆ ಎಸ್‌ಬಿಐನ ನಿಗದಿಪಡಿಸಿದ 29 ಶಾಖೆಗಳಲ್ಲಿ ಬಾಂಡ್‌ಗಳನ್ನು ಮಾರಾಟ ಮಾಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next