Advertisement

ಗಾಂಜಾ ಮಾರಾಟ: ಬಂಧನ

11:34 AM Nov 08, 2017 | Team Udayavani |

ಬೆಂಗಳೂರು: ಹೊರ ರಾಜ್ಯದಿಂದ ನಗರಕ್ಕೆ ಬಂದು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ವಿಜಯನ್‌ ವಿಕ್ರಮನ್‌ ನಾಯರ್‌ (32) ಬಂಧಿತ. ಮುಂಬೈ ಮೂಲದ ಆರೋಪಿ ಕೆಲ ತಿಂಗಳ ಹಿಂದೆ ನಗರಕ್ಕೆ ಬಂದು ನೆಲೆಸಿದ್ದು, ಎಚ್‌ಎಎಲ್‌ 2ನೇ ಹಂತದಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.

Advertisement

ಈತನಿಂದ 90 ಸಾವಿರ ರೂ. ಮೌಲ್ಯದ 1.2 ಕೆ.ಜಿ ಗಾಂಜಾ, ಮೊಬೈಲ್‌ ಮತ್ತು 1 ದ್ವಿಚಕ್ರವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಇಂದಿರಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತನಿಗೆ ಸಹಕರಿಸುತ್ತಿದ್ದ ಮತ್ತೂಬ್ಬ ವ್ಯಕ್ತಿ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮತ್ತೂಂದು ಪ್ರಕರಣದಲ್ಲಿ ಆಶೋಕನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಚೌಧರಿ ಎಂಬಾತನನ್ನು ಬಂಧಿಸಿದ್ದು, ಬಂಧಿತನಿಂದ 500 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ನೀಲಸಂದ್ರ ನಿವಾಸಿಯಾಗಿದ್ದು, ಮಸೀದಿಯ ಸುತ್ತಮುತ್ತ ಓಡಾಡುವವರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ಆಶೋಕ ನಗರ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next