Advertisement

ಬಿಜೆಪಿ ಸರ್ಕಾರದ ವಿರುದ್ಧ ಪ್ರಜ್ಞಾವಂತ ಮತದಾರರು ಎದ್ದು ನಿಂತಿದ್ದಾರೆ: ಸಲೀಂ ಅಹಮದ್

04:52 PM Apr 30, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ನಡೆದ 10 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 7 ರಲ್ಲಿ ಗೆಲುವು ಸಾಧಿಸುವ ಮೂಲಕ ಮತದಾರ ಬಾಂಧವರು ಭ್ರಷ್ಟ ಬಿಜೆಪಿ ಸರ್ಕಾರವನ್ನು ಧೂಳೀಪಟ ಮಾಡಿ ರಾಜ್ಯದ ಜನತೆಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಯಡಿಯೂರಪ್ಪ ನೇತೃತ್ವದ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಪ್ರಜ್ಞಾವಂತ ಮತದಾರರು ಎದ್ದು ನಿಂತಿದ್ದಾರೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಬಳ್ಳಾರಿ ಪಾಲಿಕೆ ಚುನಾವಣೆಯಲ್ಲೂ ಕಾಂಗ್ರೆಸ್ ಜಯಭೇರಿ: ಶಾಸಕ ರೆಡ್ಡಿ ಪುತ್ರನಿಗೂ ಸೋಲು!

ಸುಳ್ಳನ್ನೇ ಬಂಡವಾಳವನ್ನಾಗಿಸಿ ರಾಜಕೀಯ ಮಾಡುವ ಬಿಜೆಪಿ ಪಕ್ಷಕ್ಕೆ ಈ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸಲೀಂ ಅಹಮದ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೀದರ್ ನಗರಸಭೆ ಚುನಾವಣೆ: ಬಿಜೆಪಿಗೆ ಮುಖಭಂಗ, ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನ

Advertisement
Advertisement

Udayavani is now on Telegram. Click here to join our channel and stay updated with the latest news.

Next