Advertisement

ಆನೆ ದಂತ ಮಾರಾಟಕ್ಕೆ ಯತ್ನ; ನಾಲ್ವರ ಬಂಧನ, ಪ್ರಮುಖ ಆರೋಪಿ ಎಸ್ಕೇಪ್

11:55 AM Jun 30, 2022 | Team Udayavani |

ಹುಣಸೂರು: ಆನೆ ದಂತಗಳನ್ನು ಅಪಹರಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆಯೇ ನಾಗರಹೊಳೆ ಉದ್ಯಾನದ ಸಿಬ್ಬಂದಿ ಹಾಗೂ ವಿಶೇಷ ಹುಲಿ ಸಂರಕ್ಷಣಾ ದಳದ ಪ್ಲಟೂನ್-3 ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ  ನಾಲ್ಕು ಮಂದಿ ಆರೋಪಿಗಳನ್ನು ದಂತ ಹಾಗೂ ವಾಹನಗಳ ಸಮೇತ ಬಂದಿಸಿ, ಪ್ರಕರಣ ದಾಖಲಿಸಿದ್ದಾರೆ.

Advertisement

ಹುಣಸೂರು ತಾಲೂಕಿನ ಆಜಾದ್‌ನಗರ, ಉದ್ದೂರು, ಮೈಸೂರು ಹಾಗೂ ಎಚ್.ಡಿ.ಕೋಟೆ ತಾಲೂಕಿನ ಕೈಲಾಸಪುರದ ತಲಾ ಒಬ್ಬರಂತೆ ನಾಲ್ವರು ಆರೋಪಿಗಳನ್ನು ಬಂದಿಸಿದ್ದು, ಒಬ್ಬ ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ಕೃತ್ಯಕ್ಕೆ ಬಳಸಿದ್ದ ಒಂದು ಕಾರು ಹಾಗೂ ಆಟೋವನ್ನು ವಶಪಡಿಸಿಕೊಂಡಿದ್ದಾರೆ.

ಇವರು ಆನೆ ದಂತವನ್ನು ಮಾರಾಟ ಮಾಡುವ ಬಗ್ಗೆ ಬಂದ ಮಾಹಿತಿ ಮೇರೆಗೆ ಕೈಲಾಸಪುರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿ, ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಮತ್ತೆ ಕಸ್ಟಡಿಗೆ ಪಡೆಯಲಾಗಿದೆ.

ಕಾರ್ಯಾಚರಣೆಯಲ್ಲಿ ನಾಗರಹೊಳೆ ಉದ್ಯಾನವನ ಹುಲಿ ಯೋಜನೆಯ ನಿರ್ಧೇಶಕರು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ವೀರನಹೊಸಹಳ್ಳಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ನಮನ್ ನಾರಾಯಣ ನಾಯಕ್ ಹಾಗೂ ಸಿಬ್ಬಂದಿ, ವಿಶೇಷ ಹುಲಿ ಸಂರಕ್ಷಣಾ ದಳದ ಪ್ಲಟೂನ್-3 ರ ಸಿಬ್ಬಂದಿಗಳು ಭಾಗವಹಿಸಿದ್ದರೆಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next