ಕೋಟ: ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ಎನ್.ಎಚ್. ನಾಗೂರ್ ಅವರು ಇಂದು ಬ್ರಹ್ಮಾವರ ತಾಲೂಕು ಚಿತ್ರಪಾಡಿ ಸ.ಹಿ.ಪ್ರಾ.ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ತನ್ನ 55ನೇ ಹುಟ್ಟುಹಬ್ಬ ಹಾಗೂ ಉಡುಪಿ ಜಿಲ್ಲೆಯಲ್ಲಿ ಡಿ.ಡಿ.ಪಿ.ಐ. ಆಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡ ಒಂದು ವರ್ಷದ ಸಂಭ್ರಮವನ್ನು ಆಚರಿಸಿಕೊಂಡರು.
ಈ ಸಂದರ್ಭ ಮಾತನಾಡಿದ ಡಿ.ಡಿ.ಪಿ.ಐ. ಅವರು, ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮವಾದ ಶೈಕ್ಷಣಿಕ ವಾತಾವರಣವಿದೆ ಹಾಗೂ ಇಲ್ಲಿನ ಶಿಕ್ಷಕರು, ಜನಪ್ರತಿನಿಧಿಗಳು, ಸಾರ್ವಜನಿಕರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ. ಹೀಗಾಗಿ ನನ್ನ ವೃತ್ತಿ ಜೀವನದಲ್ಲಿ ಅತ್ಯಂತ ಖುಷಿ ಹಾಗೂ ನೆಮ್ಮದಿಯ ಜೀವನವನ್ನು ಉಡುಪಿ ಜಿಲ್ಲೆಯಲ್ಲಿ ಕಳೆದಿದ್ದೇನೆ. ವಿದ್ಯಾರ್ಥಿಗಳು ನನ್ನ ಪಾಲಿಗೆ ದೇವರಿದ್ದಂತೆ, ಹೀಗಾಗಿ ಅವರೊಂದಿಗೆ ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದೇನೆ ಎಂದರು.
ಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಮಾತನಾಡಿ, ಡಿ.ಡಿ.ಪಿ.ಐ. ನಾಗೂರ್ ಸರ್ ಅವರು ಬಹುಮಖ ಪ್ರತಿಭೆ ಹಾಗೂ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಜಿಲ್ಲೆಯ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ಪರಿಹರಿಸುತ್ತಿದ್ದಾರೆ ಎಂದರು.
ಇದನ್ನೂ ಓದಿ: ಕಾಫಿ ಬೆಳೆಗಾರರಿಗೆ ಸಂತಸದ ಸುದ್ದಿ; ಕಾಫಿ ಎಲೆಯಿಂದಲೂ ಪಾನೀಯ
ಈ ಸಂದರ್ಭ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಶಾಲೆಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಪ್ರಮುಖರು ಡಿ.ಡಿ.ಪಿ.ಐ. ಅವರಿಗೆ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಂಕರ್ ದೇವಾಡಿಗ, ಸಮಿತಿ ಸದಸ್ಯ ಮಂಜುನಾಥ್ ನಾರಿ ಹಾಗೂ ಡಿ.ಡಿ.ಪಿ.ಐ. ಅವರ ಪತ್ನಿ ಲಕ್ಷ್ಮಿ, ಉಪಸ್ಥಿತರಿದ್ದರುದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕಾರ್ಯಕ್ರಮ ನಿರೂಪಿಸಿ ಸಿ.ಆರ್.ಪಿ. ಸವಿತಾ ವಂದಿಸಿದರು.