ಬೆಂಗಳೂರು; ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಶಮೀರ್ ಸುಭಾನ್ ಸಾಬ್ ಶಹಪೂರ್ ಹತ್ಯೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ಗದಗ ಜಿಲ್ಲೆಯು ಕೋಮು ಸಾಮರಸ್ಯಕ್ಕೆ ಹೆಸರುವಾಸಿಯಾಗಿದ್ದು, ಈ ಭಾಗದಲ್ಲಿ ಅನೇಕರು ಶರಣರು, ಮಹಾತ್ಮರು, ಸಂತರು, ಸೂಫಿಗಳು ಹುಟ್ಟಿದ ನಾಡಿನಲ್ಲಿ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ ಹಾಗೂ ದುರ್ವೈವವ ಸಂಗತಿಯಾಗಿದೆ.
ಆದ್ದರಿಂದ ಕೂಡಲೇ ಪೊಲೀಸ್ ಇಲಾಖೆ ಘಟನೆಗೆ ಕಾರಣವಾದ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಪ್ರಕರಣವನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಮೃತ ಕುಟುಂಬದವರಿಗೆ ಸೂಕವಾದ ಪರಿಹಾರ ನೀಡಬೇಕು.
ಇದನ್ನೂ ಓದಿ:ಉತ್ತರ ಕನ್ನಡ ನನ್ನ ಕರ್ಮ ಭೂಮಿ ಅದರ ಅಭಿವೃದ್ಧಿಗೆ ಸದಾ ಶ್ರಮಿಸುವೆ :ಸಚಿವ ಶಿವರಾಮ ಹೆಬ್ಬಾರ್
ಇಂತಹ ಘಟನೆಗಳು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಮರುಕಳಿಸದ ರೀತಿಯಲ್ಲಿ ಅಧಿಕಾರಿಗಳು ಎಚ್ಚರ ವಹಿಸುವಂತೆ ಸೂಚಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಮೃತ ಕುಟುಂಬದವರಿಗೆ ನ್ಯಾಯ ಒದಗಿಸಿಕೊಡ ಬೇಕೆಂದು ಮನವಿ ಮಾಡಿದ್ದಾರೆ.