Advertisement

54ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಉದ್ಘಾಟನಾ ಸಮಾರಂಭದಲ್ಲಿ ಸಲ್ಮಾನ್ ಖಾನ್ ಉಪಸ್ಥಿತಿ?

12:52 PM Nov 08, 2023 | Team Udayavani |

ಪಣಜಿ: ಬಾಲಿವುಡ್‍ನ ಭಾಯಿಜಾನ್ ನಟ ‘ಸಲ್ಮಾನ್ ಖಾನ್’ ರವರು ಗೋವಾದಲ್ಲಿ ನವೆಂಬರ್ 20 ರಿಂದ ನಡೆಯಲಿರುವ 54 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಆದರೆ, ಸಲ್ಮಾನ್ ಖಾನ್ ತಮ್ಮ ಉಪಸ್ಥಿತಿಯನ್ನು ಇನ್ನೂ ಖಚಿತಪಡಿಸಿಲ್ಲ ಎನ್ನಲಾಗಿದೆ.

Advertisement

54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನವೆಂಬರ್ 20 ರಿಂದ 28 ರ ವರೆಗೆ ಗೋವಾದಲ್ಲಿ ನಡೆಯಲಿದೆ. ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಹಾಲಿವುಡ್ ನಟ ಮತ್ತು ನಿರ್ಮಾಪಕ ಮೈಕೆಲ್ ಡೌಗ್ಲಾಸ್ ಮತ್ತು ಅವರ ಪತ್ನಿ ಭಾಗವಹಿಸಲಿದ್ದಾರೆ. ಇದರೊಂದಿಗೆ ಸಲ್ಮಾನ್ ಖಾನ್ ಕೂಡ ಆಗಮಿಸುವ ಸಾಧ್ಯತೆ ಇದೆ. ಸಲ್ಮಾನ್ ಅವರು ತಮ್ಮ ಉಪಸ್ಥಿತಿಯನ್ನು ಇನ್ನೂ ಖಚಿತಪಡಿಸಿಲ್ಲ ಎಂದು ಗೋವಾ ಎಂಟರ್‍ಟೈನ್‍ಮೆಂಟ್ ಸೊಸೈಟಿ ಮಾಹಿತಿ ನೀಡಿದೆ.

ಗೋವಾದ ರಾಜಧಾನಿ ಪಣಜಿಯಲ್ಲಿ ನಡೆಯುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜಗತ್ತಿನ ವಿವಿಧ ದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳು ಆಗಮಿಸಲಿದ್ದಾರೆ. ಈಗಾಗಲೇ ಪ್ರತಿನಿಧಿಗಳ ಆನ್‍ಲೈನ್ ನೋಂದಣಿ ಆರಂಭಗೊಂಡಿದೆ. 300 ಕ್ಕೂ ಹೆಚ್ಚು ವಿವಿಧ ದೇಶಗಳಿಂದ ಆಯ್ದ ಚಲನಚಿತ್ರಗಳು ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ.

ಇದನ್ನೂಓದಿ: Rickshaw pullerಗೆ ಮರಣದಂಡನೆ: 10 ವರ್ಷದ ಬಾಲಕಿ ಮೇಲೆ ದೈಹಿಕ ದೌರ್ಜನ್ಯ, ಕೊಲೆ

Advertisement

Udayavani is now on Telegram. Click here to join our channel and stay updated with the latest news.

Next