ಮುಂಬಯಿ: ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಏಪ್ರಿಲ್ 14 ರಂದು ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಳಸಲಾದ ಗನ್ ಅನ್ನು ಒದಗಿಸಿದ ಆರೋಪದ ಮೇಲೆ ಅನುಜ್ ಥಾಪನ್ ಹಾಗೂ ಸೋನು ಸುಭಾಷ್ ಚಂದರ್ ನನ್ನು ಬಂಧಿಸಲಾಗಿತ್ತು.
ಏಪ್ರಿಲ್ 26 ರಂದು ಪಂಜಾಬ್‌ನಲ್ಲಿ 32 ವರ್ಷದ ಅನುಜ್ ಥಾಪನ್ ನನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದ ಈತ ಬುಧವಾರ(ಮೇ.1 ರಂದು) ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಂಭೀರವಾಗಿದ್ದಆತನನ್ನು ಮುಂಬೈನ ಜಿಟಿ ಆಸ್ಪತ್ರೆ ಸಾಗಿಸಲಾಗಿತ್ತು. ಆದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷೆ ಮಾಡಿ ಹೇಳಿರುವುದಾಗಿ ವರದಿ ತಿಳಿಸಿದೆ.
ಯಾವ ಕಾರಣದಿಂದ ಅನುಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದರ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ.
ಗುಂಡಿನ ದಾಳಿ ಘಟನೆಗೆ ಸಂಬಂಧಿಸಿ ಈಗಾಗಲೇ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎನ್ನುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.