Advertisement

ಸ್ಯಾಮ್‌ ಪೀಟರ್‌ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

11:04 PM Sep 01, 2019 | Lakshmi GovindaRaj |

ಮಂಗಳೂರು: ಕೇಂದ್ರ ತನಿಖಾ ಸಂಸ್ಥೆ ಹೆಸರು ಬಳಸಿ ದರೋಡೆಗೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿದ್ದ ಇಬ್ಬರು ಆರೋಪಿಗಳಾದ ಬೆಂಗಳೂರು ನಾಗರಬಾವಿ ನಿವಾಸಿಗಳಾದ ನಾಗರಾಜ ಮತ್ತು ರಾಘವೇಂದ್ರ ಅವರ‌ನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳು ಹಲವರಿಗೆ ವಂಚನೆ ಮಾಡಿದ್ದಲ್ಲದೆ, ವಿಧಾನ ಪರಿಷತ್‌ ಸದಸ್ಯ ಮನೋಹರ್‌ ಅವರ ವಿಧಾನಸೌಧ ವಾಹನ ಪಾಸ್‌ ಕೂಡಾ ದುರು ಪಯೋಗ ಪಡಿಸಿದ್ದರು.

Advertisement

ಈ ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಆರೋಪಿಗಳನ್ನು ಇತ್ತೀಚೆಗೆ ಬಂಧಿಸಿದ್ದರು. ವಿಧಾನಸೌಧ ಪೊಲೀಸ್‌ ಠಾಣೆ ಯಲ್ಲೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾ ಗಿದೆ. ಆರೋಪಿಗಳನ್ನು ವಿಚಾರಣೆಗಾಗಿ ಪೊಲೀಸರು ಶನಿವಾರ ಕಸ್ಟಡಿಗೆ ಪಡೆದಿದ್ದರು. ಈ ಪ್ರಕರಣದಲ್ಲಿ ಮುಖ್ಯ ಆರೋಪಿ ಸ್ಯಾಮ್‌ ಪೀಟರ್‌ನನ್ನು ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next