Advertisement

ಆರೋಗ್ಯದಲ್ಲಿ ಏರುಪೇರು: ಸಮಾಜವಾದಿ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ಆಸ್ಪತ್ರೆಗೆ ದಾಖಲು

11:04 AM Apr 08, 2024 | Team Udayavani |

ಉತ್ತರಪ್ರದೇಶ: ಚುನಾವಣೆ ತಯಾರಿ ನಡೆಸುವ ನಡುವೆಯೇ ಸಮಾಜವಾದಿ ಪಕ್ಷಕ್ಕೆ (ಎಸ್‌ಪಿ) ಶಾಕ್ ಎದುರಾಗಿದೆ. ಯುಪಿಯ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ತೀವ್ರ ಅಸ್ವಸ್ಥರಾಗಿದ್ದಾರೆ.

Advertisement

ಕುಟುಂಬಸ್ಥರು ಕಾಜಲ್ ಅವರನ್ನು ಲಕ್ನೋದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ. ನಿಶಾದ್ ಅವರು ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಆಕೆಯ ಪತಿ ಸಂಜಯ್ ನಿಶಾದ್ ಬಹಿರಂಗಪಡಿಸಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದಾಗಿನಿಂದ ಕಾಜಲ್ ನಿಶಾದ್ ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ಕ್ರಮದಲ್ಲಿ ಆರೋಗ್ಯ ಹದಗೆಟ್ಟಿದೆಯಂತೆ. ಹಾಲಿ ಬಿಜೆಪಿ ಸಂಸದ ರವಿ ಕಿಶನ್ ಶುಕ್ಲಾ ವಿರುದ್ಧ ಕಾಜಲ್ ನಿಶಾದ್ ಸ್ಪರ್ಧಿಸುತ್ತಿದ್ದಾರೆ.

ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ನಟಿ ಕಾಜಲ್ ನಿಶಾದ್ ಅವರು 2021 ರಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿದರು. ಅಂದಿನಿಂದ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. 2022 ರ ವಿಧಾನಸಭಾ ಚುನಾವಣೆಯಲ್ಲಿ ಅವರು ಕಪಿಯರ್‌ಗಂಜ್ ವಿಧಾನಸಭಾ ಕ್ಷೇತ್ರದಿಂದ ಎಸ್‌ಪಿ ಪರವಾಗಿ ಸ್ಪರ್ಧಿಸಿದ್ದರು. ಆದರೆ ಈ ವೇಳೆ ಅವರು ಸೋಲನುಭವಿಸಿದರು. ನಂತರ ಕಳೆದ ವರ್ಷ, ಅವರು ಗೋರಖ್‌ಪುರದ ಮೇಯರ್ ಹುದ್ದೆಗೆ ಸ್ಪರ್ಧಿಸಿ ಸೋತಿದ್ದರು. ಇತ್ತೀಚೆಗಷ್ಟೇ ಗೋರಖ್‌ಪುರ ಲೋಕಸಭಾ ಕ್ಷೇತ್ರದಿಂದ ಎಸ್‌ಪಿ ಎಂಪಿ ಟಿಕೆಟ್‌ ಹಂಚಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಇದನ್ನೂ ಓದಿ: Bangkok; ಮೋದಿ ಗೆಲುವಿಗಾಗಿ 13 ಸಾವಿರ ಅಡಿ ಮೇಲಿಂದ ಸ್ಕೈ ಡೈವಿಂಗ್ ಪ್ರಚಾರ

Advertisement

Udayavani is now on Telegram. Click here to join our channel and stay updated with the latest news.

Next