ಲಕ್ನೋ:ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಕ್ಸಿಜನ್ ಸಪೋರ್ಟ್ ನಲ್ಲಿ ಇದ್ದಿರುವುದಾಗಿ ಲಕ್ನೋದ ಮೇದಾಂತ ಆಸ್ಪತ್ರೆ ಶನಿವಾರ(ಮೇ 29) ಮಾಹಿತಿ ನೀಡಿದೆ.
ಇದನ್ನೂ ಓದಿ:ಲಾಕ್ ಡೌನ್ ವಿಸ್ತರಣೆ ಕುರಿತು ಸಚಿವರ ಸಭೆಯಲ್ಲಿ ಸಿಎಂ ಬಿಎಸ್ ವೈ ನಿರ್ಧಾರ: ಬೊಮ್ಮಾಯಿ
ಅಜಂ ಖಾನ್ ಅವರನ್ನು ಮೇ 9ರಂದು ಸೀತಾಪುರ್ ಜೈಲಿನಿಂದ ಲಕ್ನೋದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ಅಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿ ತಿಳಿಸಿದೆ. ಅಜಂ ಖಾನ್ ಮಗ ಅಬ್ದುಲ್ ಖಾನ್ ಕೂಡಾ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿ ಹೇಳಿದೆ.
ಏಪ್ರಿಲ್ 30ರಂದು ಅಜಂ ಖಾನ್ ಹಾಗೂ ಪುತ್ರನನ್ನು ಪರೀಕ್ಷೆಗೊಳಪಡಿಸಿದಾಗ ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಮೇ 9ರಂದು ಖಾನ್ ಆರೋಗ್ಯ ತೀವ್ರ ಹದಗೆಟ್ಟ ನಂತರ ಇಬ್ಬರನ್ನೂ ಆ್ಯಂಬುಲೆನ್ಸ್ ನಲ್ಲಿ ಲಕ್ನೋ ಆಸ್ಪತ್ರೆಗೆ ಕಳುಹಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಅಜಂ ಖಾನ್ ವಿರುದ್ಧ ನೂರಕ್ಕೂ ಅಧಿಕ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಕಳೆದ ಫೆಬ್ರುವರಿಯಿಂದ ಸೀತಾಪುರ್ ಜೈಲಿನಲ್ಲಿದ್ದಿರುವುದಾಗಿ ವರದಿ ವಿವರಿಸಿದೆ. ಮಗ ಅಬ್ದುಲ್ಲಾ ಖಾನ್ ವಿರುದ್ಧವೂ ಹಲವು ಪ್ರಕರಣ ದಾಖಲಾಗಿದ್ದರಿಂದ ಜೈಲುಶಿಕ್ಷೆ ಅನುಭವಿಸುತ್ತಿದ್ದ ಎಂದು ವರದಿ ತಿಳಿಸಿದೆ.