Advertisement

ಸಮಾಜವಾದಿ ಪಕ್ಷ ಇಬ್ಭಾಗ, ಸಹೋದರನ ಹೊಸ ಪಕ್ಷಕ್ಕೆ ಮುಲಾಯಂ ಸಾರಥ್ಯ

02:42 PM May 05, 2017 | Sharanya Alva |

ನವದೆಹಲಿ:ಉತ್ತರಪ್ರದೇಶ ಚುನಾವಣೆಯಲ್ಲಿ ಮುಲಾಯಂ ಸಿಂಗ್, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಹೀನಾಯವಾಗಿ ಸೋತಿದ್ದು, ಇದೀಗ ಕೊನೆಗೂ ಸಮಾಜವಾದಿ ಪಕ್ಷ ಇಬ್ಭಾಗವಾಗಿದ್ದು, ಸಮಾಜವಾದಿ ಸೆಕ್ಯೂಲರ್ ಮೋರ್ಚಾ ಎಂಬ ಹೊಸ ಪಕ್ಷವನ್ನು ಸ್ಥಾಪಿಸುವುದಾಗಿ ಶಿವಪಾಲ್ ಯಾದವ್(77ವರ್ಷ) ಶುಕ್ರವಾರ ಘೋಷಿಸಿದ್ದಾರೆ. ಸಹೋದರ ಮುಲಾಯಂ ಸಿಂಗ್ ಯಾದವ್ ಅವರು ಹೊಸ ಪಕ್ಷದ ಸಾರಥ್ಯ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಂದೆ ಮುಲಾಯಂ ಸಿಂಗ್ ಯಾದವ್ ಅವರು ರಾಜಕೀಯದ ವಿರೋಧಿ ಪಾಳಯದಲ್ಲಿ ಗುರುತಿಸಿಕೊಂಡಂತಾಗಿದೆ. ಮುಲಾಯಂ ಸಿಂಗ್ ಯಾದವ್ ಅವರು 1992ರಲ್ಲಿ ಸಮಾಜವಾದಿ ಪಕ್ಷವನ್ನು ಸ್ಥಾಪಿಸಿದ್ದರು. ಕಳೆದ ಒಂದು ವರ್ಷದಿಂದ ಮುಲಾಯಂ ಸಿಂಗ್ ಪುತ್ರ ಅಖಿಲೇಶ್ ಹಾಗೂ ಮುಲಾಯಂ ಸಿಂಗ್, ಸಹೋದರ ಶಿವಪಾಲ್ ಯಾದವ್ ನಡುವೆ ಜಿದ್ದಾಜಿದ್ದಿ ನಡೆದಿತ್ತು. ಈ ಜಿದ್ದಾಜಿದ್ದಿಯಿಂದಾಗಿ ಸಮಾಜವಾದಿ ಪಕ್ಷ ಇಬ್ಭಾಗವಾಗುವ ಮುನ್ಸೂಚನೆ ನೀಡಿತ್ತು.

ಇದೀಗ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಧೂಳಿಪಟವಾಗುವ ಮೂಲಕ ಉತ್ತರಪ್ರದೇಶದಲ್ಲಿ ಅಧಿಕಾರ ಕಳೆದುಕೊಂಡಿದೆ. ಇದರ ಬೆನ್ನಲ್ಲೇ ಅಖಿಲೇಶ್ ಚಿಕ್ಕಪ್ಪ ಹೊಸ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದು, ಅದಕ್ಕೆ ಮುಲಾಯಂ ಅಧ್ಯಕ್ಷರಾಗಲಿದ್ದಾರೆ ಎಂದು ಎಎನ್ ಐ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ನೇತಾಜಿ ಅವರಿಗೆ ಗೌರವ ವಾಪಸ್ ತಂದು ಕೊಡುವ ನಿಟ್ಟಿನಲ್ಲಿ ಹಾಗೂ ನಿಜವಾದ ಸಮಾಜವಾದಿಗಳನ್ನು ಒಗ್ಗೂಡಿಸಲು ನಾವು ಹೊಸ ಪಕ್ಷವನ್ನು ಹುಟ್ಟುಹಾಕುತ್ತಿದ್ದೇವೆ. ಅದಕ್ಕೆ ಮುಲಾಯಂ ಅಧ್ಯಕ್ಷರಾಗಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next