Advertisement

ಚೈ-ಸ್ಯಾಮ್ ದಾಂಪತ್ಯ ಮುರಿದು ಬೀಳಲು ಕಾರಣವಾಯ್ತೇ ‘ದಿ ಫ್ಯಾಮಿಲಿ ಮ್ಯಾನ್ 2’ ?

06:09 PM Oct 02, 2021 | Team Udayavani |

ಹೈದರಾಬಾದ್ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಟಾಲಿವುಡ್ ನಟ ನಾಗಚೈತನ್ಯ ಹಾಗೂ ನಟಿ ಸಮಂತಾ ಇಂದು ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯ ಹೇಳಿದ್ದಾರೆ. ಪರಸ್ಪರ ಒಪ್ಪಿಕೊಂಡೇ ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ. ಈ ತಾರಾ ಜೋಡಿ ಡಿವೋರ್ಸ್ ಮಾಡಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡಿತ್ತಾದರೂ, ವಿಚ್ಛೇದನಕ್ಕೆ ಕಾರಣ ಏನು ಎಂಬುದು ಮಾತ್ರ ಸದ್ಯಕ್ಕೆ ರಹಸ್ಯವಾಗಿ ಉಳಿದಿದೆ.

Advertisement

ತೆಲುಗು ಚಿತ್ರರಂಗದಲ್ಲಿ ಮೋಸ್ಟ್ ಕ್ಯೂಟ್ ಕಪಲ್ ಎಂದು ಗುರುತಿಸಿಕೊಂಡಿದ್ದ ಚೈ-ಸ್ಯಾಮ್ ದಾಂಪತ್ಯ ಮುರಿದು ಬಿದ್ದಿರುವುದು ಸಾಕಷ್ಟು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಈ ಜೋಡಿ ವಿಚ್ಛೇದನ ಪಡೆಯುತ್ತಿರುವುದಕ್ಕೆ ಕಾರಣ ಏನು ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿದೆ.

ಚೈ-ಸ್ಯಾಮ್ ದಾಂಪತ್ಯಕ್ಕೆ ಕಲ್ಲು ಹಾಕಿತಾ ಫ್ಯಾಮಿಲಿ ಮ್ಯಾನ್ ?

ನಾಗಚೈತನ್ಯ ಹಾಗೂ ಸಮಂತಾ ದಾಂಪತ್ಯದಲ್ಲಿ ಹುಳಿ ಹಿಂಡಿದ್ದು ದಿ ಫ್ಯಾಮಿಲಿ ಮ್ಯಾನ್ 2 ವೆಬ್ ಸೀರಿಸ್ ಎನ್ನುವ ಮಾತು ಇದೀಗ ಕೇಳಿ ಬರುತ್ತಿದೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ನಲ್ಲಿ ಕಾಣಿಸಿಕೊಂಡಿದ್ದ ಸಮಂತಾ, ಬೋಲ್ಡ್​ ದೃಶ್ಯಗಳಲ್ಲಿ ನಟಿಸಿದ್ದರು. ಅನೇಕ ಇಂಟಿಮೇಟ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಕೆಲವು ದೃಶ್ಯಗಳು ಎಷ್ಟು ಮಾದಕವಾಗಿದ್ದವೆಂದರೆ ಸ್ವತಃ ನಿರ್ದೇಶಕರು ಈ ದೃಶ್ಯಗಳಿಗೆ ಕತ್ತರಿ ಹಾಕಿದ್ದರು. ಈ ವಿಚಾರವೇ ವಿಚ್ಛೇದನಕ್ಕೆ ಕಾರಣವಾಯ್ತು ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ.

ಸಮಂತಾ ವೃತ್ತಿ ಜೀವನದ ದೃಷ್ಟಿಯಲ್ಲಿ ‘ದಿ ಫ್ಯಾಮಿಲಿ ಮ್ಯಾನ್​ 2’ ಬಹಳ ಮಹತ್ವ ಪಡೆದುಕೊಂಡಿದೆ. ಈ ಕಾರಣಕ್ಕೆ ಅವರು ವೆಬ್​ ಸೀರಿಸ್​ ಒಪ್ಪಿಕೊಂಡಿದ್ದರು. ಇದಕ್ಕೆ ಕುಟುಂಬದವರ ವಿರೋಧವಿದ್ದರೂ ಅವರು ತಲೆಕೆಡಿಸಿಕೊಂಡಿಲ್ಲ ಎನ್ನಲಾಗುತ್ತಿದೆ. ಈ ವಿಚಾರವೇ ಈಗ ಡಿವೋರ್ಸ್​ವರೆಗೆ ತಂದು ನಿಲ್ಲಿಸಿತು ಎನ್ನುತ್ತಿವೆ ಮೂಲಗಳು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next