ತೆಲುಗು ನಟ ನಾಗಚೈತನ್ಯ ಹಾಗೂ ಶೋಭಿತಾ ಧುಲಿಪಾಲ ಅವರ ಫೋಟೋವೊಂದು ಬಹಿರಂಗವಾದ ಬೆನ್ನಲ್ಲೇ ಸಮಂತಾ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ.
Advertisement
ನಾಗಚೈತನ್ಯ ವಿರುದ್ಧ ವಾಗ್ಧಾಳಿ ನಡೆಸಿರುವ ಸಮಂತಾ ಫ್ಯಾನ್ಸ್, “ಕರ್ಮ ಯಾರನ್ನೂ ಸುಮ್ಮನೆ ಬಿಡಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.
ನಾಗಚೈತನ್ಯ ಹಾಗೂ ಸಮಂತಾ ವಿಚ್ಛೇದನ ಪಡೆದಾಗಲೇ, ನಾಗಚೈತನ್ಯ- ಶೋಭಿತಾರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೂ, ವಿಚ್ಛೇದನಕ್ಕೆ ಸಮಂತಾ ಕಾರಣ ಎಂದು ಕೆಲವರು ಟ್ರೋಲ್ ಮಾಡಿದ್ದರು. ಆ ಟ್ರೋಲ್ಗಳಿಗೂ ಈಗ ಸಮಂತಾ ಅಭಿಮಾನಿಗಳು ಛೀಮಾರಿ ಹಾಕಿದ್ದಾರೆ.