Advertisement
ಗಾಂಧಿನಗರ ವಾರ್ಡ್‌ಉಪ್ಪಾರಪೇಟೆ ಠಾಣೆ ಹಿಂಭಾಗದಲ್ಲಿರುವ ಮಸ್ಟರಿಂಗ್ ಕೇಂದ್ರ ಸೇರಿದಂತೆ ನಗರದ ವಿವಿಧ ಪ್ರದೇಶದಲ್ಲಿನ ಕಸ ವಿಲೇವಾರಿ, ವಿಂಗಡಣೆ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಪೌರಕಾರ್ಮಿ ಕರಿಗೆಕೆಲವು ಸೂಚನೆ ನೀಡಿದರು.
Related Articles
Advertisement
ಜೈವಿಕ ಅನಿಲ ಘಟಕ ತಪಾಸಣೆ: ಪಾಲಿಕೆ ವ್ಯಾಪ್ತಿಯ ಜೈವಿಕ ಅನಿಲ ಘಟಕ ತಪಾಸಣೆ ನಡೆಸಿ, ಘಟಕ ಕಾರ್ಯನಿರ್ವಹಿಸುವ ಬಗ್ಗೆ ಮಾಹಿತಿ ಪಡೆದರು. ಹಸಿ ತ್ಯಾಜ್ಯ, ಪ್ರಾಣಿ ತ್ಯಾಜ್ಯ, ಸಗಣಿಯ ಮೂಲಕ ಜೈವಿಕ ಅನಿಲ ಉತ್ಪಾದಿಸಲಾಗುತ್ತಿದ್ದು, ದಿನಕ್ಕೆ 5 ಟನ್ ಸಾಮರ್ಥ್ಯ ಹೊಂದಿದೆ. ಘಟಕದಿಂದ ಉತ್ಪತ್ತಿಯಾಗುವ ವಿದ್ಯುತ್ ಸ್ವಾತಂತ್ರ್ಯ ಉದ್ಯಾನದ ಬೀದಿ ದೀಪಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕುಮಾರ ಪಾರ್ಕ್ ಬಳಿ ಆಟೋ ಟಿಪ್ಪರ್ ಮೂಲಕ ಕಾಂಪ್ಯಾಕ್ಟರ್‌ಗೆ ಕಸ ವಿಲೇವಾರಿ ಮಾಡುವ ಹಾಗೂ ಕಸ ವಿಂಗಡಣೆ ಮಾಡುವ ವೇಳೆ ಸಿಬ್ಬಂದಿ ಗ್ಲೌಸ್ ಹಾಕದೆ ಕೆಲಸ ಮಾಡುವುದನ್ನು ಗಮನಿಸಿದ ಆಡಳಿತಾಧಿಕಾರಿ, ಸಿಬ್ಬಂದಿಗೆ ಏಕೆ ಸುರಕ್ಷಾ ಸಾಧನ ನೀಡಿಲ್ಲ. ಈ ಸಂಬಂಧ ಏನುಕ್ರಮಕೈಗೊಂಡಿದ್ದೀರಾ ಎಂದು ಪ್ರಶ್ನಿಸಿದರು. ಈ ರೀತಿಘಟನೆ ಮರುಕಳಿಸದಂತೆ ಸೂಚಿಸಿದರು. ಘನತ್ಯಾಜ್ಯ ನಿರ್ವಹಣೆ ಮುಖ್ಯ ಎಂಜಿನಿಯರ್ ವಿಶ್ವನಾಥ್, ಪಶ್ಚಿಮ ವಲಯ ಜಂಟಿ ಆಯುಕ್ತ ಚಿದಾನಂದ, ವಾರ್ಡ್ ನೋಡಲ್ ಅಧಿಕಾರಿ ಗೀತಾ ಇತರರಿದ್ದರು.
ಹಳೆ ಕಸದ ಗಾಡಿಗೆ ಮುಕ್ತಿ : ನಗರದಲ್ಲಿ ಕಸದ ಆಟೋ ಟಿಪ್ಪರ್‌ಗಳು ಹೋಗಲು ಸಾಧ್ಯವಿಲ್ಲದ ಪ್ರದೇಶದಲ್ಲಿ ಮಾತ್ರ ಕಸದ ತಳ್ಳುವ ಗಾಡಿ ಬಳಸುವಂತೆ ಹಾಗೂ ಉಳಿದ ರಸ್ತೆಗಳಲ್ಲಿ ಬಳಸದಂತೆ ಹಾಗೂ ಕೂಡಲೇ ಹಳೆಯ ಕಸ ತಳ್ಳುವ ಗಾಡಿ ಹಿಂತೆಗದುಕೊಳ್ಳಲು ಸೂಚನೆ ನೀಡಿದರು. ವಿಶೇಷ ಆಯುಕ್ತ ರಂದೀಪ್ ಪ್ರತಿಕ್ರಿಯಿಸಿ, ಕಸ ತಳ್ಳುವ ಗಾಡಿಗಳನ್ನು ಆಟೋ ಟಿಪ್ಪರ್‌ಗಳು ಹೋಗದ ಸ್ಥಳಗಳಲ್ಲಿ ಮಾತ್ರ ಬಳಕೆ ಮಾಡಲಾಗುತ್ತಿದೆ. ರಸ್ತೆ ಬದಿ ಗುಡಿಸುವ ತ್ಯಾಜ್ಯವನ್ನು ಒಂದೆಡೆ ಹಾಕಿ ಆಟೋಗಳ ಮೂಲಕವೇ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮಾನವೀಯತೆ ಮುಖ್ಯ: ಕುಮಾರಪಾರ್ಕ್ ಬಳಿ ಕಸ ವಿಲೇವಾರಿ ಮಾಡುವ ಸಂದರ್ಭದಲ್ಲಿ ಪಾಲಿಕೆ ಸಿಬ್ಬಂದಿ ಯಾವುದೇ ಸುರಕ್ಷತಾ ಸಾಧನ ಬಳಸದೆ ಕೆಲಸ ಮಾಡುತ್ತಿದ್ದನ್ನು ನೋಡಿ ಆಡಳಿತಾಧಿಕಾರಿ ಪಾಲಿಕೆಯ ಅಧಿಕಾರಿಗಳನ್ನುತರಾಟೆಗೆತೆಗೆದುಕೊಂಡರು. ಅಲ್ಲದೆ, ಯಾವುದೇ ಸಾಧನ ನೀಡದೆ ಕೆಲಸ ಮಾಡಿಸುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿ,ಸ್ವಚ್ಛತಾ ಸಿಬ್ಬಂದಿಯನ್ನು ಮಾನವೀಯತೆಯಿಂದ ನಡೆಸಿಕೊಳ್ಳಿ ಎಂದರು.