Advertisement

ಡಿಆರ್ ಡಿಒ ಮುಖ್ಯಸ್ಥರಾಗಿ ಖ್ಯಾತ ವಿಜ್ಞಾನಿ ಸಮೀರ್ ವಿ.ಕಾಮತ್ ನೇಮಕ

04:20 PM Aug 25, 2022 | Team Udayavani |

ನವದೆಹಲಿ : ಖ್ಯಾತ ವಿಜ್ಞಾನಿ ಸಮೀರ್ ವಿ. ಕಾಮತ್ ಅವರನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಅಧ್ಯಕ್ಷರಾಗಿ ಗುರುವಾರ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.

Advertisement

ಡಿಆರ್‌ಡಿಒದಲ್ಲಿ ನೌಕಾ ವ್ಯವಸ್ಥೆಗಳು ಮತ್ತು ಸಾಮಗ್ರಿಗಳ ಮಹಾನಿರ್ದೇಶಕರಾಗಿರುವ ಕಾಮತ್ ಅವರು ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರರಾಗಿ ನೇಮಕಗೊಂಡ ಜಿ. ಸತೀಶ್ ರೆಡ್ಡಿ ಅವರ ಉತ್ತರಾಧಿಕಾರಿಯಾಗಲಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಕಾಮತ್ ಅವರು 60 ವರ್ಷ ವಯಸ್ಸಾಗುವವರೆಗೆ ಅಥವಾ ಮುಂದಿನ ಆದೇಶದವರೆಗೆ ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next