ಅರಂತೋಡು: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕ ಸಮೀಪ ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿ ಹೊಡೆದ ಘಟನೆ ರವಿವಾರ ನಡೆದಿದೆ.
Advertisement
ಕಾರು ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಪರಿಣಾಮವಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.