Advertisement

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

10:27 PM Sep 22, 2024 | Team Udayavani |

ಅರಂತೋಡು: ವಸತಿ ನಿಲಯದಿಂದ ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವನ್ನು ಇಬ್ಬರು ವಿದ್ಯಾರ್ಥಿಗಳು ಹಿಡಿದೆಳೆದ ಪರಿಣಾಮವಾಗಿ ಮರ್ಮಾಂಗ ಊದಿಕೊಂಡು ಬಾಲಕ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ವರದಿಯಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷದ ಬಾಲಕ ಕಳೆದ ಕೆಲ ಸಮಯಗಳಿಂದ ಕೊಡಗು ಸಂಪಾಜೆಯ ವಸತಿ ನಿಲಯದಲ್ಲಿ ಶಾಲೆಗೆ ಹೋಗುತ್ತಿದ್ದು ಸೆ.14ರಂದು ರಾತ್ರಿ ವಸತಿ ನಿಲಯದಲ್ಲಿ ಇಬ್ಬರು ಸಹಪಾಠಿ ವಿದ್ಯಾರ್ಥಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು.

ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವಾಗುತ್ತಿದ್ದ ಪರಿಣಾಮ ಮನೆಗೆ ಬಂದಿದ್ದನೆನ್ನಲಾಗಿದೆ.

ಬಾಲಕ ಮರ್ಮಾಂಗ ಊದಿಕೊಂಡಿದ್ದರಿಂದ ತಾಯಿಯೊಡನೆ ವಿಷಯ ತಿಳಿಸಿದನೆನ್ನಲಾಗಿದೆ .ಬಾಲಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಈಗ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕನಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದು ಬಂದಿದೆ .

Advertisement
Advertisement

Udayavani is now on Telegram. Click here to join our channel and stay updated with the latest news.

Next