Advertisement
ಚಂದ್ರಯಾನ-3 ಯೋಜನೆಯ ಭಾಗವಾಗಿ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳು ಈ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದಾರೆ.“ಚಂದ್ರಯಾನ-3 ಯೋಜನೆಯ ಯಶಸ್ಸು ಭವಿಷ್ಯದ ಚಂದ್ರನ ಯೋಜನೆಗಳಿಗೆ ದಿಕ್ಸೂಚಿಯಾಗಿದೆ. ಭೂಮಿಯಿಂದ ಚಂದ್ರನಿಗೆ ತಲುಪಿದ ನಂತರ ಚಂದ್ರನಲ್ಲಿರುವ ಮಾದರಿ ವಸ್ತುಗಳನ್ನು ಭೂಮಿಗೆ ತರುವ ಯೋಜನೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇಸ್ರೋ ನಿರತವಾಗಿದೆ. ಇದರಿಂದ ಪೂರ್ಣ ಪ್ರಮಾಣದಲ್ಲಿ ಆ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ಸಾಧ್ಯವಾಗಲಿದೆ’ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.