Advertisement

ಸ್ನೇಹಿತನ ತೋಟದಲ್ಲಿ ಸಂಚಾರಿ ವಿಜಯ್ ಅಂತ್ಯಸಂಸ್ಕಾರ: ಪಂಚನಹಳ್ಳಿಯಲ್ಲಿ ಸಿದ್ದತೆ

10:30 AM Jun 15, 2021 | Team Udayavani |

ಚಿಕ್ಕಮಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ನಟ ಸಂಚಾರಿ ವಿಜಯ್ ಅವರ ಅಂತ್ಯ ಸಂಸ್ಕಾರಕ್ಕೆ ಸ್ವಗ್ರಾಮ ಪಂಚನಹಳ್ಳಿಯಲ್ಲಿ ಸಿದ್ದತೆ ನಡೆಸಲಾಗುತ್ತಿದೆ.

Advertisement

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ವಿಜಯ್ ಸ್ನೇಹಿತ ರಘು ತೋಟದಲ್ಲಿ ಅಂತ್ಯ ಸಂಸ್ಕಾರದ ನಡೆಯಲಿದೆ. ಲಿಂಗಾಯತ ಸಮುದಾಯದ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ನಡೆಯಲಿದ್ದು, ಅಂತಿಮ ವಿಧಿ ವಿಧಾನಗಳು ಕುಪ್ಪೂರು ಮಠದ ಮಠಾಧೀಶರ ನೇತೃತ್ವದಲ್ಲಿ ನಡೆಯಲಿದೆ.

ಹುಟ್ಟೂರು ಪಂಚನಹಳ್ಳಿ ಗೆ ಬಂದಾಗೆಲ್ಲಾ ಸಂಚಾರಿ ವಿಜಯ್ ಅವರು ಇದೇ ತೋಟದಲ್ಲಿ ಕಾಲ ಕಳೆಯುತ್ತಿದ್ದರು. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಇದೇ ತೋಟದಲ್ಲಿ ವಿಜಯ್ ಅಂತ್ಯಸಂಸ್ಕಾರ ನಡೆಯಲಿದೆ.

ಇದನ್ನೂ ಓದಿ:ಸಾವಿನಲ್ಲೂ ಸಾರ್ಥಕತೆ : ನಟ ಸಂಚಾರಿ ವಿಜಯ್ ಅಂಗಾಂಗ ದಾನ ಪ್ರಕ್ರಿಯೆ ಆರಂಭ

ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ಸಂಚಾರಿ ವಿಜಯ್ , ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ಆಸ್ಪತ್ರೆಯ ವೈದ್ಯರು ಸ್ಪಷ್ಟ ಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next