Advertisement
ಮರಳನ್ನು ಸಾಗಾಟ ಮಾಡಲು ಇಚ್ಛಿಸುವವರು ತಮ್ಮ ವಾಹನಗಳನ್ನು ಉಡುಪಿ ಇ-ಸ್ಯಾಂಡ್ ಆ್ಯಪ್‌ನಲ್ಲಿ ನೊಂದಾಯಿಸಿಕೊಳ್ಳಲು ಈಗಾಗಲೇ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಉಡುಪಿ ಜಿಲ್ಲೆ ದೂ.ಸಂ. 0820-2572333ನ್ನು ಸಂಪರ್ಕಿಸಬಹುದು ಎಂದವರು ತಿಳಿಸಿದ್ದಾರೆ.
ದೇಶದಾದ್ಯಂತ ಡಿ. 1ರಿಂದ ಎಲ್ಲ ಹೆದ್ದಾರಿ ಟೋಲ್‌ಗಳಲ್ಲಿ ಕಡ್ಡಾಯ ಫಾಸ್ಟಾಗ್ ಅಳವಡಿಕೆಗೆ ಕೇಂದ್ರ ಸರಕಾರ ಆದೇಶ ಹೊರಡಿಸಿದ್ದು, ಎಲ್ಲ ವಾಹನಗಳ ಮಾಲಕರು ವಾಹನಗಳಿಗೆ ಫಾಸ್ಟಾಗ್ ಕಡ್ಡಾಯವಾಗಿ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಫಾಸ್ಟಾಗ್ ಇರದ ವಾಹನಗಳು ನಿಗದಿತ ಶುಲ್ಕದ ಎರಡು ಪಟ್ಟು ನೀಡಬೇಕಾಗುತ್ತದೆ ಎಂದು ತಿಳಿಸಿದ ಡಿಸಿ, ಫಾಸ್ಟಾಗ್ ಸೌಲಭ್ಯವನ್ನು ಎಲ್ಲ ಟೋಲ್‌ಗಳಲ್ಲಿ ಮತ್ತು ಸಂಬಂಧಿಸಿದ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳಲ್ಲಿ ಪಡೆಯಬಹುದಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಆರ್‌ಟಿಒ ರಾಮಕೃಷ್ಣ ರೈ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ರಮೇಶ್ ಬಾಬು, ನವಯುಗದ ಶಿವಪ್ರಸಾದ್ ಉಪಸ್ಥಿತರಿದ್ದರು.