ಯಾದಗಿರಿ: ರಾಜ್ಯ ಸರ್ಕಾರ ರೂಪಿಸಿರುವ ಹೊಸ ಮರಳು ನೀತಿ-2020ರ ಅನ್ವಯ ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳ ಮರಳು ನಿರ್ವಹಣೆಯನ್ನು ಹಟ್ಟಿ ಚಿನ್ನದ ಗಣಿ ಪ್ರೈಲಿ. ವತಿಯಿಂದ ನಿರ್ವಹಿಸಬೇಕಿದೆ. ಹಾಗಾಗಿ ಜಿಲ್ಲೆಯ ಮರಳು ನಿರ್ವಹಣೆಯನ್ನು ಹಟ್ಟಿ ಚಿನ್ನದ ಗಣಿಗೆ ವಹಿಸಿಕೊಡುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ನಿರ್ದೇಶನ ನೀಡಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮರಳು ನಿರ್ವಹಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯಾದಗಿರಿ ಜಿಲ್ಲೆಯಲ್ಲಿ ಒಟ್ಟು ಆರು ಮರಳು ಬ್ಲಾಕ್‌ಗಳಿವೆ. ರಾಜ್ಯ ಸರ್ಕಾರದ ಆದೇಶದಂತೆ ಅವುಗಳ ನಿರ್ವಹಣೆ ಹಟ್ಟಿ ಚಿನ್ನದ ಗಣಿ ಪ್ರçವೆಟ್ ಲಿಮಿಟೆಡ್‌ಗೆ ವಹಿಸಿ ಕೊಡುವಂತೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಆಸಿಫ್ ಉಲ್ಲಾಗೆ ಸೂಚಿಸಿದರು.
ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಮರಳು ಸಮಿತಿ ಸಭೆ ಕಾಲ ಕಾಲಕ್ಕೆ ಜರುಗಿಸಿ ಅದರ ನಡಾವಳಿಗಳನ್ನು ಜಿಲ್ಲಾ ಮರಳು ಸಮಿತಿಗೆ ಸಲ್ಲಿಸಬೇಕು, ಅನಧಿಕೃತ ಮರಳು ಸಾಗಾಣಿಕೆ ತಡೆಗಟ್ಟಲು ತಹಶೀಲ್ದಾರರು ಹಾಗೂ ಸಂಬಂ ಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ತಿಳಿಸಿದರು.
ವಿವಿಧೆಡೆ ವಶಪಡಿಸಿಕೊಳ್ಳಲಾದ ಅನಧಿಕೃತ ಮರಳನ್ನು ಲೋಕೋಪಯೋಗಿ ಇಲಾಖೆಯವರು ನಿಯಮಾನುಸಾರ ಕ್ರಮವಹಿಸಬೇಕು. ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಜಿಲ್ಲೆಯಲ್ಲಿರುವ ಕ್ರಷರ್‌ಗಳ ಕಾರ್ಯವೈಖರಿ ಪರಿಶೀಲಿಸುವಂತೆ ತಿಳಿಸಿದ ಅವರು ಮುಂದಿನ ಸಭೆಯೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಇದ್ದರು