Advertisement

ಕಟ್ಟಡ ನಿರ್ಮಾಣಕ್ಕೆ ಸಾಕಷ್ಟು ಮರಳು ಲಭ್ಯ

01:59 AM Jan 06, 2022 | Team Udayavani |

ಉಡುಪಿ: ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಮರಳಿನ ದಾಸ್ತಾನು ಇದೆ. ಸಾರ್ವಜನಿಕರು ಸ್ಯಾಂಡ್‌ ಆ್ಯಪ್‌ ಮೂಲಕ ಬೇಡಿಕೆಗಳನ್ನು ಸಲ್ಲಿಸಿ ಮರಳು ಪಡೆಯಬಹುದು ಎಂದು ಜಿಲ್ಲಾಧಿ
ಕಾರಿ ಕೂರ್ಮಾರಾವ್‌ ಎಂ. ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ ಹಾಲ್‌ನಲ್ಲಿ ಬುಧವಾರ ಮರಳು ವಿತರಣೆ ಕುರಿತು ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಮರಳನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ವಿತರಿಸಲು ಜಿಲ್ಲಾ ಕಾರ್ಯಪಡೆ ಸಮಿತಿಯು ಸ್ಯಾಂಡ್‌ ಆ್ಯಪ್‌ಗ್ಳಲ್ಲಿನ ಬೇಡಿಕೆಗೆ ಅನುಗುಣವಾಗಿ ವಿತರಿಸಲು ಮುಂದಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಮರಳು ಸಾಗಾಣಿಕೆ ವಾಹನ ಹಾಗೂ ದೋಣಿಗಳಲ್ಲಿ ಅಳವಡಿಸಿರುವ ಜಿಪಿಎಸ್‌ ಪರಿಶೀಲಿಸಿ, ಅದರ ಚಲನ ವಲನಗಳ ಮೇಲೆ ನಿಗಾ ವಹಿಸಬೇಕು. ನಿಯಮ ಉಲ್ಲಂಘಿಸಿದ್ದಲ್ಲಿ ಅಂತ ಹವರ ಮೇಲೆ ನಿರ್ದಾಕ್ಷಿಣ್ಯವಾಗಿ ದಂಡ ವಸೂಲಿ ಮಾಡಬೇಕು. ಮರಳು ತೆಗೆಯುವ ಧಕ್ಕೆ ಹಾಗೂ ದಾಸ್ತಾನು ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಸೂಚನೆ ನೀಡಿದರು.

ಕುಂದಾಪುರ ವ್ಯಾಪ್ತಿಯಲ್ಲಿ ಜಿಪಿಎಸ್‌ ಉಲ್ಲಂಘನೆ ಮಾಡಿದ ಮರಳು ಪರವಾನಗಿದಾರರ ವಿರುದ್ಧ 16 ಪ್ರಕರಣ ದಾಖಲಿಸಿ 8 ಲಕ್ಷ ರೂ. ದಂಡ ವಿಧಿಸಲಾಗಿದೆ. ಉಡುಪಿ ಮತ್ತು ಬ್ರಹ್ಮಾವರದಲ್ಲಿ 3 ಪ್ರಕರಣ ದಾಖಲಿಸಿ 50,000 ಸಾವಿರ ರೂ. ದಂಡ ವಿಧಿಸಿ, ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸಿ ಮರಳು ದಾಸ್ತಾನು ಮಾಡಿದವರ ವಿರುದ್ಧ 34 ಪ್ರಕರಣ ದಾಖಲಿಸಿ 13 ಲಕ್ಷ ರೂ.ಗಳಿಗೂ ಹೆಚ್ಚು ದಂಡ ವಿಧಿಸಲಾಗಿದೆ. ವಾಹನ ಜಿಪಿಎಸ್‌ ಉಲ್ಲಂ ಸಿದ 76 ಪ್ರಕರಣ ದಾಖಲಿಸಿ 5 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದರು.

ನ. 24ರಿಂದ ಡಿ. 31ರ ವರೆಗೆ ಕಂಟ್ರೋಲ್‌ ರೂಂನಲ್ಲಿ 125 ದೂರುಗಳು ಸ್ವೀಕೃತವಾಗಿದೆ. ಅವುಗಳಲ್ಲಿ 123 ವಿಲೇವಾರಿ ಮಾಡಲಾಗಿದೆ. ಲಿಖಿತ ಅಥವಾ ದೂರವಾಣಿ ಮೂಲಕ ಬರುವ ದೂರುಗಳನ್ನು ನಿರ್ಲಕ್ಷಿಸದೇ ಅವುಗಳ ಬಗ್ಗೆ
ತನಿಖೆ ಕೈಗೊಂಡು ತಪ್ಪಿತಸ್ಥರು ಎಂದು ಕಂಡುಬಂದಲ್ಲಿ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement

ಇದನ್ನೂ ಓದಿ:ಜಾಬ್ರಾ ಎಲೈಟ್‌ 4 ಆ್ಯಕ್ಟಿವ್‌ ಬಿಡುಗಡೆ; 7 ಗಂಟೆ ಬ್ಯಾಟರಿ ಲೈಫ್ ಇರುವ ಇಯರ್‌ಬಡ್‌

ಕಲ್ಲು ಗಣಿಗಾರಿಕೆ ಹಾಗೂ ಕಲ್ಲು ಪುಡಿ ಮಾಡುವ ಘಟಕಗಳಿಗೆ ಪರವಾನಗಿ ನೀಡುವ ಸಂದರ್ಭ ಸರಕಾರ ಸೂಚಿಸಿರುವ ನಿಯವåಗಳು ಸರಿಯಾಗಿ ಪಾಲನೆಯಾಗಿದೆಯೇ ಎಂಬ ಬಗ್ಗೆ ಕೂಲಂಕಷವಾಗಿ ಪರಿಶೀಲಿಸುವುದರೊಂದಿಗೆ ಕಾನೂನಿನ ಅಡಿಯಲ್ಲಿ ಅವರಿಗೆ ಲೈಸೆನ್ಸ್‌ ನೀಡಬೇಕು. ಸರಕಾರಿ ಜಾಗದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ. ಆದರೂ ಗಣಿಗಾರಿಕೆ ಯನ್ನು ಪುನಃ ಮಾಡುತ್ತಿರುವುದು ಕಂಡುಬರುತ್ತಿದೆ. ಅಂತಹವರ ವಿರುದ್ಧ ಕಂದಾಯ ಇಲಾಖೆ ಅಧಿಕಾರಿಗಳು ಭೂ ಕಬಳಿಕೆ ಅಧಿನಿಯಮದಡಿ ಪ್ರಕರಣ ದಾಖಲಿಸಬೇಕು ಎಂಬ ಸೂಚನೆ ನೀಡಿದರು.

ಸರಕಾರಿ ಜಾಗದಲ್ಲಿ ಸಿಗುವ ಎಲ್ಲ ರೀತಿಯ ಖನಿಜಗಳ ಬ್ಲಾಕ್‌ ಗುರುತಿಸುವುದರೊಂದಿಗೆ ಗಣಿಗಾರಿಕೆ ಕೈಗೊಳ್ಳಲು ಬ್ಲಾಕ್‌ಗಳ ಹರಾಜು ಪ್ರಕ್ರಿಯೆ ಕೈಗೊಳ್ಳಲು ಕ್ರಮ ವಹಿಸಬೇಕು ಎಂದರು. ಕುಂದಾಪುರ ಡಿಎಫ್ಒ ಆಶೀಶ್‌ ರೆಡ್ಡಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಸಿಆರ್‌ಝಡ್‌ನ‌ ಪ್ರಾದೇಶಿಕ ನಿರ್ದೇಶಕ ಶ್ರೀಪತಿ, ಹಿರಿಯ ಭೂ ವಿಜ್ಞಾನಿ ಸಂದೀಪ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next