Advertisement

Sand Mafia ಅಕ್ರಮ ಮರಳು ಸಾಗಣಿಕೆ: ಟ್ರ್ಯಾಕ್ಟರ್ ಹರಿದು ಪೊಲೀಸ್ ಪೇದೆ ಸಾವು

12:12 PM Jun 16, 2023 | Team Udayavani |

ಕಲಬುರಗಿ: ಅಕ್ರಮ ಮರುಳು ಸಾಗಾಣಿಕೆ‌ ಮಾಡುತ್ತಿದ್ದ ಟ್ರಾಕ್ಟರ್ ಹರಿದು ಜೇವರ್ಗಿ ತಾಲೂಕು ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲ್ಲೂರು ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ನಡೆದಿದೆ

Advertisement

ಮೃತ ಪೇದೆಯಲ್ಲಿ ನೆಲೋಗಿ ಪೊಲೀಸ್ ಠಾಣೆಯ ಮಯೂರ್ ಬೀಮು ಚವ್ಹಾಣ (51) ಎಂದು ಗುರುತಿಸಲಾಗಿದೆ.

ಭೀಮಾ ನದಿಯಿಂದ ಉಸುಕನ್ನು ಅಕ್ರಮವಾಗಿ ಎತ್ತಿ ಬೇರಡೆ ಸಾಗಿಸುತ್ತಿದ್ದ ಟ್ಯಾಕ್ಟರ್ ತಡಯಲು ಹೋದಾಗ ಟ್ಯಾಕ್ಟರ್ ಚಾಲಕ ಪೇದೆಯನ್ನು ನಿರ್ಲಕ್ಷ ಮಾಡಿ ಹಾಗೆ ಹಾಯಿಸಿಕೊಂಡು ಹೋದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಘಟನೆ ಕುರಿತು ಎಸ್ಪಿ ಇಷಾ ಪಂತ್ ಪ್ರತಿಕ್ರಿ ಸಿದ್ದು ಘಟನೆ ನಡೆದಿರುವುದು ನೋವಿನ ಸಂಗತಿಯಾಗಿದ್ದು, ಈ ಘಟನೆಯ ಹಿಂದೆ ಯಾವ ಉದ್ದೇಶ ಇದೆ ಎನ್ನುವುದು ತನಿಖೆಯ ನಂತರ ತಿಳಿದು ಬರಲಿದೆ. ಆದರೆ, ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಕುರಿತು ಕಲಿಕೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ನಿರಂತರ ಲೂಟಿ: ಜೇವರ್ಗಿ ತಾಲೂಕಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಭೀಮ ನದಿಯನ್ನೇ ಮೂಲವಾಗಿಟ್ಟುಕೊಂಡು ಅವ್ಯಾಹತವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದು ರಾಜ್ಯದ ಎಲ್ಲ ಇಲಾಖೆ ಹಾಗೂ ಮುಖ್ಯಮಂತ್ರಿಗಳಿಗೂ ಗೊತ್ತಿರುವ ವಿಚಾರವೇ ಆಗಿದೆ.

Advertisement

ಆದರೂ ಕೂಡ ಇದನ್ನು ತಡೆಯುವ ಬೀಮಾ ನದಿಯನ್ನು ಉಳಿಸುವ ನಿಟ್ಟಿನಲ್ಲಿ ಹಲವಾರು ಸ್ವಾಮಿಗಳು ಕೂಡ ಹೋರಾಟ ನಡೆಸಿದ್ದರು ಕೂಡ, ಯಾವುದೇ ಪ್ರಯೋಜನ ಕಂಡುಬಂದಿಲ್ಲ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ವಾಹನಗಳು ಹಾದು ಈಗ ಪೇದೆ ಬಲಿಯಾಗಿದ್ದು, ಇದಕ್ಕೂ ಮುನ್ನ ಹಲವಾರು ಸಾರ್ವಜನಿಕ ಅದರಲ್ಲೂ ಮಕ್ಕಳು ಬಲಿಯಾದ ಘಟನೆಗಳು ಕೂಡ ನಡೆದಿರುವುದು ಖೇದಕರ ಸಂಗತಿಯಾಗಿದೆ.

ಉಸ್ತುವಾರಿ ಸಚಿವರ ಸಾಂತ್ವಾನ: ಘಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ಅಕ್ರಮ‌ ಮರುಳು ಸಾಗಾಣಿಕೆ ತಡೆಗೆ ಕೂಡಲೇ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ ನೀಡಿರುವ ಅವರು, ಇದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಕರೆ ಮಾಡಿ ಮಾತನಾಡಿದ್ದು ತನಿಖೆಗೆ ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮೃತ ಪೊಲೀಸ್ ಪೇದೆ ಕುಟುಂಬಕ್ಕೆ ಸಾಂತ್ವನ ಹೇಳಿರುವ ಸಚಿವರು ಸರ್ಕಾರ ವತಿಯಿಂದ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ದೊರಕಿಸಿಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ.

” ಜಿಲ್ಲೆಯಲ್ಲಿ ಅಕ್ರಮ ಮರುಳು ಸಾಗಾಣಿಕೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದ್ದರೂ ಕೂಡಾ ಈ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಂಬಂಧಿಸಿದ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಆದೇಶ ನೀಡಿ ಈ ಕೂಡಲೇ ಅಕ್ರಮ ಮರುಳು ಸಾಕಾಣಿಕೆ ವಿರುದ್ದ ಕಾನೂನು ಕ್ರಮ ಜರುಗಿಸಲು ನಿರ್ದೇಶಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next