Advertisement

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಮಸ್ಯೆಗಳ ಈಡೇರಿಕೆಗಾಗಿ ಸಿಎಂಗೆ ಶಾಸಕರ ನಿಯೋಗ ಮನವಿ

12:19 PM Oct 15, 2020 | sudhir |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಹಾನಿಯ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿರುವ ನಿಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂಬ ಬಹಳಷ್ಟು ಹಾನಿಯಾಗಿದೆ. ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ಧನ ನೀಡುವ ಬಗ್ಗೆ ಮುಖ್ಯಮಂತ್ರಿಯವರಿಗೆ ಲಿಖಿತ ಮನವಿ ಸಲ್ಲಿಸಿದರು.

ಕರಾವಳಿಯ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕು ಹಾಗೂ ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ದ.ಕ.ಜಿಲ್ಲಾ ಶಾಸಕರ ನಿಯೋಗ ಗುರುವಾರ ಬೆಳಗ್ಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ನೀಡಿದೆ.
ಕರಾವಳಿಯ ಮೂರು ಜಿಲ್ಲೆಗಳ ನದಿಗಳಲ್ಲಿ ಮುಳುಗಿ ಮರಳು ತೆಗೆಯುವ ಕ್ರಮ ಬಹಳ ಹಿಂದಿನಿಂದಲೂ ಇದೆ. ಅದನ್ನು ಮುಂದುವರಿಸಬೇಕು.ಕರಾವಳಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯುತ್ತಿದ್ದು, ಇತರ ಜಿಲ್ಲೆಗಳ ನಿಯಮಗಳು ಇಲ್ಲಿಗೆ ಅನ್ವಯಿಸುವುದಿಲ್ಲ ಅದಕ್ಕಾಗಿ ನದಿಯಲ್ಲಿ ಮರಳು ಗಣಿಗಾರಿಕೆ ನಿಷೇಧವನ್ನು ತೆಗೆಯಬೇಕು. ಇದು ಕೇವಲ ಕರಾವಳಿಗೆ ಜಿಲ್ಲೆಗಳಿಗೆ ಮಾತ್ರ ಅನ್ವಯ ಆಗಬೇಕು ಎಂದು ನಿಯೋಗ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದೆ.

ಮಳೆಹಾನಿ ಪರಿಹಾರ ಬಿಡುಗಡೆ ಮಾಡಲು ಕೂಡ ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ದ.ಕ ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಿಂದ ಅಪಾರ ಹಾನಿಯಾಗಿದ್ದು, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ವಿತರಣೆಗೆ ಸರಕಾರ ಪರಿಹಾರ ಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ನಿಯೋಗದಲ್ಲಿ ಸಚಿವರ ಜತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಶಾಸಕರಾದ ಅಂಗಾರ, ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ಡಾ.ಭರತ್ ಶೆಟ್ಟಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next