Advertisement

ಮರಳು ಸಮಸ್ಯೆ: ಶೀಘ್ರ ಪರಿಹಾರಕ್ಕೆ ಸಂಸದೆ ಆಗ್ರಹ

08:50 AM Nov 17, 2018 | Team Udayavani |

ಉಡುಪಿ: ಮರಳು ಸಮಸ್ಯೆಯ ಬಗ್ಗೆ ಶೀಘ್ರ ನಿರ್ಧಾರ ಕೈಗೊಂಡು ಮರಳುಗಾರಿಕೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಲ್ಲಿ ಮಾತುಕತೆ ನಡೆಸಿದ್ದೇನೆ. ಸರಕಾರ ಮತ್ತು ಜಿಲ್ಲಾಧಿಕಾರಿಗಳ ವಿಳಂಬ ಧೋರಣೆಯಿಂದ ಸಮಸ್ಯೆ ಜಟಿಲಗೊಂಡಿದೆ. ಈ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

Advertisement

ಮಣಿಪಾಲದ ತಮ್ಮ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಸ್ಯೆಗೆ ಪರಿಹಾರವಾಗಿ ಎಸಿ ಮೂಲಕ ಅಗತ್ಯವುಳ್ಳವರಿಗೆ ಮರಳು ಕೊಡಿಸುವ ವ್ಯವಸ್ಥೆ ಮಾಡಬಹುದು ಎಂದರು. ಸಿಆರ್‌ಝಡ್‌ ಬಗ್ಗೆ ಕೇಂದ್ರ ಸರಕಾರ ಕ್ರಮ ತೆಗೆದುಕೊಳ್ಳಬೇಕಿದ್ದು, ಕೇಂದ್ರದ ಜತೆ ಚರ್ಚಿಸುವುದಾಗಿ ತಿಳಿಸಿದರು. ರಾಮ ಮಂದಿರ ನಿರ್ಮಾಣದ ವಿಚಾರ ಜನರ ಧಾರ್ಮಿಕ ನಂಬಿಕೆಗೆ ಸಂಬಂಧಪಟ್ಟದ್ದು. ಇದನ್ನು ಸುಪ್ರೀಂ ಕೋರ್ಟ್‌ ಶೀಘ್ರ ಇತ್ಯರ್ಥಗೊಳಿಸಿ ಜನರ ಭಾವನೆಗೆ ಸ್ಪಂದಿಸಬೇಕಾಗಿದೆ ಎಂದರು.

ಜನರ ಆಶೋತ್ತರಗಳಿಗೆ ಸ್ಪಂದಿಸಬೇಕಾದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ ಹುಟ್ಟಿದ ಐದು ತಿಂಗಳಲ್ಲೇ ಸತ್ತು ಹೋಗಿದೆ. ರಾಜ್ಯದಲ್ಲಿ ಜನಪರ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು. ಮುಂದಿನ ಬಾರಿ ಚುನಾವಣೆಗೆ ನಿಲ್ಲುವ ಬಗ್ಗೆ ಚಿಂತನೆ ನಡೆಸಿಲ್ಲ. ರಾಷ್ಟ್ರ, ರಾಜ್ಯ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಿದ್ದೇನೆ. ಉಡುಪಿ-ಚಿಕ್ಕಮಗಳೂರು ಸಂಸದ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಬಗ್ಗೆ ಪ್ರಯತ್ನಿಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next