Advertisement

ಸಾರ್ವಜನಿಕರಿಗೆ ತೊಂದರೆಯಾಗದಂತೆ ಮರಳು: ಕೋಟ ಸೂಚನೆ

01:16 AM Dec 17, 2019 | Team Udayavani |

ಮಂಗಳೂರು: ಸಾರ್ವಜನಿಕರಿಗೆ ಸುಲಭವಾಗುವ ರೀತಿಯಲ್ಲಿ ಮರಳು ಪೂರೈಕೆ ಮಾಡಬೇಕು, ಯಾವುದೇ ರೀತಿಯ ತೊಂದರೆ, ಕಷ್ಟಗಳಾಗ ಬಾರದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

Advertisement

ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‌ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.

ಸರಕಾರಿ ಕಾಮಗಾರಿಗಳಿಗೆ ಸಕಾಲದಲ್ಲಿ ಮರಳು ಪೂರೈಕೆಯಾಗಿ ಕಾಮಗಾರಿಗಳನ್ನು ಆದಷ್ಟು ಕನಿಷ್ಠ ಸಮಯದಲ್ಲಿ ಪೂರ್ತಿಗೊಳಿಸುವಂತೆ ನೋಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಸ್ಯಾಂಡ್‌ ಬಝಾರ್‌ ಆ್ಯಪ್‌ ಮೂಲಕ ಮರಳು ಕಾಯ್ದಿರಿಸಿ, 2- 3 ದಿನಗಳೊಳಗೆ ಮರಳು ದೊರಕದೆ ಇದ್ದಲ್ಲಿ ಈ ಕುರಿತು ಸಾರ್ವಜನಿಕರು ದೂರು ನೀಡಬಹುದು. ಸಾರ್ವಜನಿಕರಿಗೆ ಸುಲಭ ರೀತಿಯಲ್ಲಿ ಯೋಜನೆಗಳು ಸಕ್ರಿಯವಾಗಬೇಕು ಎಂದರು.

ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಲ್ಲಿ 4.62 ಕೋ.ರೂ. ಮೊತ್ತ ಲಭ್ಯವಿದ್ದು, ಇದನ್ನು ಗಣಿಗಾರಿಕೆಯಿಂದ ತೊಂದರೆಗೀಡಾದ ಪ್ರದೇಶಗಳ ಅಭಿವೃದ್ಧಿಗೆ ಬಳಸಲಾಗುವುದು. ಆಯಾ ಪ್ರದೇಶದ ಶಾಸಕರಿಂದ ಕ್ರಿಯಾ ಯೋಜನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಸಚಿವರು ಸೂಚಿಸಿದರು.

Advertisement

ಡಿ.ಎಂ.ಎಫ್‌. ಖಾತೆಯಲ್ಲಿ ಲಭ್ಯವಿರುವ ಮೊತ್ತವನ್ನು ವಿವಿಧ ಕಾಮಗಾರಿ ಗಳಿಗೆ ಹಂಚಿಕೆ ಮಾಡಲಾಗಿರುತ್ತದೆ. ಸಮಿತಿ ಸಭೆಯ ತೀರ್ಮಾನದಂತೆ ವಿಧಾನಸಭೆ ಕ್ಷೇತ್ರಕ್ಕೆ ಅನುಗುಣವಾಗಿ ಕಾಮಗಾರಿ ಮತ್ತು ಅನುದಾನದ ಮೊತ್ತವನ್ನು ಹಂಚಿಕೆ ಮಾಡಲಾಗಿದ್ದು, ಸಂಬಂಧಪಟ್ಟ ವಿಧಾನಸಭಾಸದಸ್ಯರಿಗೆ ಕಳುಹಿಸಿಕೊಡಲಾಗಿರುತ್ತದೆ. ಕ್ಷೇತ್ರಗಳಿಗೆ ಅಗತ್ಯವಿರುವ ಕಾಮಗಾರಿಗಳ ಪಟ್ಟಿಯನ್ನು ಸಭೆಯ ಗಮನಕ್ಕೆ ತರಲಾಯಿತು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌, ಶಾಸಕ ಉಮಾನಾಥ ಕೋಟ್ಯಾನ್‌, ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್‌ ಹೆಗ್ಡೆ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next