Advertisement

ಧಾರಾಳ ಮರಳು ಲಭ್ಯ: ಸಚಿವ ಪ್ರಮೋದ್‌

11:37 AM Oct 07, 2017 | Team Udayavani |

ಬ್ರಹ್ಮಾವರ: ಉಡುಪಿ ಜಿಲ್ಲೆಯ ಮರಳು ಹೊರ ಜಿಲ್ಲೆ, ರಾಜ್ಯಗಳಿಗೆ ಸಾಗಿಸುವುದು ನಿಷೇಧಿ ಸಿರುವುದರಿಂದ ಜಿಲ್ಲೆಯಲ್ಲಿ ಮರಳು ಧಾರಾಳವಾಗಿ ದೊರೆಯಲಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

Advertisement

ಅವರು ಶುಕ್ರವಾರ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ವಸತಿ ಗೃಹದ ಬಳಿ ಬೈಕಾಡಿ ಗ್ರಾಮ ಮಟ್ಟದ ಜನಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದರು. ಸರಕಾರದ ಸವಲತ್ತುಗಳನ್ನು ಪಡೆಯು ವುದು ಜನರ ಹಕ್ಕು. ಅವರ ಕಷ್ಟಗಳಿಗೆ ಸ್ಪಂದಿಸುವಂತಾಗ ಬೇಕು. ಈ ನಿಟ್ಟಿನಲ್ಲಿ ದೇಶದಲ್ಲೇ ಪ್ರಥಮವೆಂಬಂತೆ ಪ್ರತಿ ಗ್ರಾಮ ಮಟ್ಟದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ ಎಂದರು.

ಈಗಿನ ಸರಕಾರದ ಕಾರ್ಯವೈಖರಿಯೇ ಭಿನ್ನ ಹಿಂದಿನ ಸರಕಾರದ ಅವಧಿಯಲ್ಲಿ ಬಿಪಿಎಲ್‌ ಕಾರ್ಡ್‌ ಪಡೆಯಲು ಹರಸಾಹಸ ಪಡಬೇಕಿತ್ತು. ಆದರೆ ಸಿದ್ಧರಾಮಯ್ಯ ನೇತೃತ್ವದ ಸರಕಾರ ಬಂದ ಮೇಲೆ ಕಾರ್ಡ್‌ ಪಡೆಯಲು ಇದ್ದ ನಿಯಮಗಳನ್ನು ಸರಳಗೊಳಿಸಿ ಪ್ರತೀ ಕ್ಷೇತ್ರದಲ್ಲಿ ಸಹಸ್ರಾರು ಬಿಪಿಎಲ್‌ ಕಾರ್ಡ್‌ ವಿತರಿಸಲಾಯಿತು. ಮೊದಲಿನ ಸರಕಾರ ಸಂಧ್ಯಾ ಸುರಕ್ಷಾ ಅರ್ಜಿ ಸ್ವೀಕಾರವನ್ನೇ ನಿಲ್ಲಿಸಿದ್ದರು. ನಮ್ಮ ಸರಕಾರ ಎರಡು ತಿಂಗಳಲ್ಲಿ ಮಂಜೂರಾತಿ ಮಾಡುತ್ತಿದೆ. ಇದು ಕಾರ್ಯವೈಖರಿಯಲ್ಲಿನ ವ್ಯತ್ಯಾಸ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು. ಜಾಗದ ಹಕ್ಕು ಪತ್ರ ಹಾಗೂ ಬಿಪಿಎಲ್‌ ಕಾರ್ಡ್‌ ನಿಂದ ದೊರೆಯುವ ಹಲವಾರು ಸೌಲಭ್ಯಗಳನ್ನು ಬಳಸಿಕೊಳ್ಳಿ ಎಂದು ಸಚಿವರು ಕರೆ ನೀಡಿದರು.

ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ, ಸದಸ್ಯೆ ವಸಂತಿ ಪೂಜಾರಿ, ಹಾರಾಡಿ ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯೆ ಮಲ್ಲಿಕಾ ಬಿ. ಪೂಜಾರಿ, ವಿಶೇಷ ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೋಹನ್‌ರಾಜ್‌ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ಗ್ರಾ.ಪಂ. ಉಪಾಧ್ಯಕ್ಷ ಕುಮಾರ್‌ ಸುವರ್ಣ ಸ್ವಾಗತಿಸಿ, ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next