ಚಿಕ್ಕಮಗಳೂರು: ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಅಂತ್ಯಸಂಸ್ಕಾರವು ಸ್ವಗ್ರಾಮ ಪಂಚನಹಳ್ಳಿಯಲ್ಲಿ ನಡೆಯಿತು.
ವಿಜಯ್ ಸ್ನೇಹಿತ ರಘು ತೋಟದಲ್ಲಿ ಕುಪ್ಪೂರು ಯತೀಶ್ವರ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ಅಂತ್ಯಕ್ರಿಯೆ ಕಾರ್ಯದ ವಿಧಿ ವಿಧಾನಗಳು ನಡೆದವು.
ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಮರ್ಪಣೆ ಮಾಡಿದರು. ಸರಕಾರಿ ಗೌರವದ ಬಳಿಕ ವೀರಶೈವ ಲಿಂಗಾಯತ ಧಾರ್ಮಿಕ ವಿಧಿಯ ಪ್ರಕಾರ ಶವ ಸಂಸ್ಕಾರ ನಡೆಲಾಯಿತು.
ಇದನ್ನೂ ಓದಿ:ಹುಟ್ಟೂರು ತಲುಪಿದ ಸಂಚಾರಿ ವಿಜಯ್ ಪಾರ್ಥಿವ ಶರೀರ: ಸ್ನೇಹಿತನ ತೋಟದಲ್ಲಿ ಅಂತ್ಯ ಸಂಸ್ಕಾರ
ಅಂತ್ಯ ಸಂಸ್ಕಾರ ನಡೆಯುವ ಜಾಗದಲ್ಲಿ ಹೆಚ್ಚಿನ ಜನರಿಗೆ ಅವಕಾಶ ನೀಡಿರಲಿಲ್ಲ. ಗ್ರಾಮಸ್ಥರು ತೋಟದಲ್ಲಿ ನಿಂತುಕೊಂಡಿದ್ದರು. ಸ್ಥಳದಲ್ಲಿ ಸಚಿವ ಮಾಧುಸ್ವಾಮಿ, ಶಾಸಕರಾದ ಸಿಟಿ ರವಿ, ಬೆಳ್ಳಿಪ್ರಕಾಶ್, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾಗಿದ್ದ ಸಂಚಾರಿ ವಿಜಯ್ ಅವರು ‘ನಾನು ಅವನಲ್ಲ ಅವಳು’ ಚಿತ್ರಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು.
ಇದನ್ನೂ ಓದಿ:ಸಾವಿನಲ್ಲೂ ಸಾರ್ಥಕತೆ : ನಟ ಸಂಚಾರಿ ವಿಜಯ್ ಅಂಗಾಂಗ ದಾನ ಪ್ರಕ್ರಿಯೆ ಆರಂಭ