ಮಹಾಲಿಂಗಪುರ : 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲು ಒತ್ತಾಯಿಸಿ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಕಳೆದ 20 ದಿನಗಳಿಂದ ಹೋರಾಟ ನಡೆಯುತ್ತಿದೆ.
ಹೋರಾಟ ನಡೆಸುತ್ತಿರುವ ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟದ ಹೋರಾಟಗಾರರು ರವಿವಾರ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿಯಿರುವ ಶ್ರೀಮುತ್ತು ನಿವಾಸದಲ್ಲಿ ಕನ್ನಡ ಚಿತ್ರರಂಗದ ನಾಯಕ ಡಾ. ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ನಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು.
ಹೋರಾಟಗಾರರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಡಾ.ಶಿವರಾಜ್ ಕುಮಾರ್ ಅವರು ಬರುವ ಮಾರ್ಚ್ 9 ರಂದು ಪ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಿ ಬೆಂಬಲ ಸೂಚಿಸುವದಾಗಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಈ ಕುರಿತು ಚರ್ಚಿಸುವದಾಗಿ ತಿಳಿಸಿದರು.
ರಾಜ್ಯಾಧ್ಯಕ್ಷ ಜಿ.ಸಿ.ಶಿವಪ್ಪಾ. ಪ್ರಧಾನ ಕಾರ್ಯದರ್ಶಿಗಳಾದ ಶೀತಲ ಮಾಲಗಾಂವೆ, ಶಿಕ್ಷಕರಾದ ಶ್ರೀನಿವಾಸ ಕಾಂಬಳೇಕರˌ, ಸುರೇಶ ಬಿರಾದಾರ, ಎಂ.ಎಸ್. ಮಠ, ಗಿರೀಶಕುಮಾರ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ : ಮಡಹಳ್ಳಿ ಗುಡ್ಡ ಕುಸಿತ: ಎಡರನೇ ದಿನದ ಕಾರ್ಯಾಚರಣೆ; ಮತ್ತೊಬ್ಬನ ಶವ ಹೊರಕ್ಕೆ